ಬರೇಲಿ(ಉತ್ತರಪ್ರದೇಶ): ಅಕ್ರಮ ಸಂಬಂಧಕ್ಕೆ ಹುಟ್ಟಿದವಳೆಂದು ಆರೋಪಿಸಿ ತಂದೆಯೇ ತನ್ನ ಎಂಟು ವರ್ಷದ ಮಗಳ ಮೇಲೆ ಅತ್ಯಾಚಾರ ಎಸಗಿ ಕೊಲೆ ಮಾಡಿರುವ ಘಟನೆ ಉತ್ತರಪ್ರದೇಶದಲ್ಲಿ ನಡೆದಿದೆ.
ಪೊಲೀಸ್ ಮೂಲಗಳ ಪ್ರಕಾರ ಘಟನೆ ನಡೆದ ದಿನ ಸಂಜೆಯಿಂದ ಬಾಲಕಿ ಕಾಣೆಯಾಗಿದ್ದಳು. ಆಕೆಯ ಮೃತದೇಹ ಪಕ್ಕದ ಮನೆಯವರ ಶೌಚಾಲಯದಲ್ಲಿ ಪತ್ತೆಯಾಗಿತ್ತು. ಹೀಗಾಗಿ ಅವರ ಮೇಲೆ ಬಾಲಕಿ ತಂದೆ ದೂರು ದಾಖಲಿಸಿದ್ದ.
ತಂದೆಯ ದೂರಿನ ಅನ್ವಯ ಯುವಕನನ್ನು ಬಂಧಿಸಿ ವಿಚಾರಣೆ ನಡೆಸಲಾಯಿತು. ಆದರೆ ಆತ ಯಾವುದೇ ಕೃತ್ಯ ಎಸಗಿಲ್ಲ ಎಂದು ಪೊಲೀಸರ ಬಳಿ ಹೇಳಿದ್ದಾನೆ. ಅಲ್ಲದೆ ಬಾಲಕಿಯ ತಂದೆ ಪತ್ನಿಯೊಂದಿಗೆ ಪ್ರತಿ ದಿನ ಜಗಳವಾಡುತ್ತಿದ್ದ ಬಗ್ಗೆ ತಿಳಿಸಿದ್ದಾನೆ. ಮತ್ತು ಆತನಿಗೆ ಈ ಯುವಕ ಸಾಲವನ್ನೂ ನೀಡಿದ್ದ ಎಂದು ತಿಳಿದು ಬಂದಿದೆ.
ಪತ್ನಿಯನ್ನು ಕರೆದು ವಿಚಾರಣೆ ನಡೆಸಿದಾಗ ಆಕೆ ಕೂಡ ಗಂಡನ ಮೇಲೆ ಅನುಮಾನ ವ್ಯಕ್ತಪಡಿಸಿದ್ದಾಳೆ. ವಿಧಿವಿಜ್ಞಾನ ಪ್ರಯೋಗಾಲಯದ ವರದಿ ಕೈಸೇರಿದಾಗ ಕೃತ್ಯದಲ್ಲಿ ತಂದೆಯ ಪಾತ್ರ ಇರುವ ಬಗ್ಗೆ ತಿಳಿದುಬಂದಿದೆ. ತಲೆ ಮರೆಸಿಕೊಂಡಿದ್ದ ಆತನನ್ನ ಬಂಧಿಸಿ ವಿಚಾರಣೆ ನಡೆಸಿದಾಗ. ಪತ್ನಿ ಅಕ್ರಮ ಸಂಬಂಧ ಹೊಂದಿರುವ ಶಂಕೆಯಿಂದ ಈ ಕೃತ್ಯ ಎಸಗಿದ್ದಾಗಿ ಒಪ್ಪಿಕೊಂಡಿದ್ದಾನೆ ಎಂದು ಪೊಲೀಸರು ತಿಳಿಸಿದ್ದಾರೆ.