ಮೀರತ್: ಕೇಂದ್ರ ಸರ್ಕಾರ ಪೌರತ್ವ ತಿದ್ದುಪಡಿ ಕಾಯ್ದೆ ವಿರುದ್ಧದ ಪ್ರತಿಭಟನೆ ವೇಳೆ ಕೆಲ ದುಷ್ಕರ್ಮಿಗಳು, ಬೆಂಕಿ ಹಚ್ಚಿ ಪೊಲೀಸರನ್ನು ಸುಡಲು ಯತ್ನಿಸಿದ್ದಾರೆ ಎಂಬ ಆರೋಪ ಕೇಳಿಬಂದಿದೆ. ಇದಕ್ಕೆ ಪೂರಕವಾಗಿ ಪೊಲೀಸರು ಈ ವಿಡಿಯೋವನ್ನು ಬಿಡುಗಡೆ ಮಾಡಿದ್ದಾರೆ.
ಡಿಸೆಂಬರ್ 20ರಂದು ಉತ್ತರಪ್ರದೇಶದ ಮೀರತ್ನಲ್ಲಿ ಈ ಘಟನೆ ನಡೆದಿದೆ. ಕಳೆದ ಕೆಲ ದಿನಗಳ ಹಿಂದೆ ಉತ್ತರಪ್ರದೇಶದಲ್ಲಿ ಪೌರತ್ವ ತಿದ್ದುಪಡಿ ಕಾಯ್ದೆ ವಿರುದ್ಧ ಜನರು ರಸ್ತೆಗೆ ಇಳಿದು ದೊಡ್ಡ ಮಟ್ಟದ ಪ್ರತಿಭಟನೆ ನಡೆಸುತ್ತಿದ್ದರು. ಈ ವೇಳೆ ನಡೆದ ಹಿಂಸಾಚಾರದಲ್ಲಿ ಸುಮಾರು 10ಕ್ಕೂ ಹೆಚ್ಚು ಪ್ರತಿಭಟನಾಕಾರರು ಮೃತಪಟ್ಟಿದ್ದರು.
ಉದ್ವಿಗ್ನ ಪರಿಸ್ಥಿತಿಯಲ್ಲಿ ಪೊಲೀಸರಿದ್ದ ಅಂಗಡಿಗೆ ಕೆಲ ಪ್ರತಿಭಟನಾಕಾರರು ಬೆಂಕಿ ಹಚ್ಚಿ, ಅವರನ್ನ ಜೀವಂತವಾಗಿ ಸುಡುವ ಪ್ರಯತ್ನ ನಡೆಸಿದ್ದಾರೆ ಎನ್ನಲಾಗಿದೆ. ಈ ವೇಳೆ ಪೊಲೀಸರು ತಕ್ಷಣವೇ ಹೊರಗೆ ಓಡಿಬಂದು ತಮ್ಮ ಪ್ರಾಣ ಉಳಿಸಿಕೊಂಡಿದ್ದಾರೆ.