ಮೀರತ್: ಉತ್ತರ ಪ್ರದೇಶದ ಮೀರತ್ನ ಲಿಸಾಡಿಗೇಟ್ ಪೊಲೀಸ್ ಠಾಣೆ ಬಳಿ ಅಪರಿಚಿತ ಮಹಿಳೆಯ ದೇಹದ ವಿವಿಧ ಭಾಗಗಳು ಗೋಣಿ ಚೀಲದಲ್ಲಿ ಪತ್ತೆಯಾಗಿವೆ. ಅನುಮಾನಾಸ್ಪದ ರೀತಿಯಲ್ಲಿ ಕೊಲೆ ಮಾಡಿರುವ ಸಾಧ್ಯತೆ ಇದೆ ಎನ್ನಲಾಗಿದೆ. ಇದರ ಬಗ್ಗೆ ಮಾಹಿತಿ ಪಡೆದುಕೊಂಡಿರುವ ಪೊಲೀಸರು ತನಿಖೆ ಆರಂಭಿಸಿದ್ದಾರೆ.
ಗೋಣಿ ಚೀಲದಲ್ಲಿ ರುಂಡ ಇಲ್ಲದ ದೇಹದ ವಿವಿಧ ಭಾಗಗಳು ಪತ್ತೆಯಾಗಿವೆ. ನಿನ್ನೆ ಸಂಜೆ ಸ್ಥಳೀಯರು ಇದರ ಬಗ್ಗೆ ಪೊಲೀಸರಿಗೆ ಮಾಹಿತಿ ನೀಡಿದ್ದಾರೆ. ಲಭ್ಯವಾಗಿರುವ ಮಾಹಿತಿ ಪ್ರಕಾರ ಮಹಿಳೆ 35 ವರ್ಷದವಳು ಎಂದು ತಿಳಿದು ಬಂದಿದೆ.
ಮೃತದೇಹ ವಶಕ್ಕೆ ಪಡೆದುಕೊಂಡಿರುವ ಪೊಲೀಸರು ಮರಣೋತ್ತರ ಪರೀಕ್ಷೆಗೆ ರವಾನೆ ಮಾಡಿದ್ದಾರೆ. ಇದಕ್ಕೆ ಸಂಬಂಧಿಸಿದಂತೆ ಪ್ರತಿಕ್ರಿಯೆ ನೀಡಿರುವ ಎಸ್ಪಿ ಅಖಿಲೇಶ್ ನಾರಾಯಣ್, ಕಳೆದ ಕೆಲ ದಿನಗಳ ಹಿಂದೆ ಮಹಿಳೆಯನ್ನ ಕೊಲೆ ಮಾಡಿರಬಹುದು ಎಂದು ಶಂಕೆ ವ್ಯಕ್ತಪಡಿಸಲಾಗಿದೆ. ಇನ್ನು ಗೋಣಿ ಚೀಲದಲ್ಲಿ ಮಹಿಳೆಯ ತಲೆ ಇಲ್ಲದಿರುವುದು ಅನೇಕ ಅನುಮಾನಗಳಿಗೆ ಎಡೆ ಮಾಡಿ ಕೊಟ್ಟಿದೆ.