ಮುಜಫ್ಫರ್ನಗರ(ಬಿಹಾರ್): ಮನ್ಸೂರ್‌ಪುರ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿರುವ ಬೆಗರಾಜ್‌ಪುರ ಗ್ರಾಮದಲ್ಲಿನ ಕಬ್ಬಿನ ಗದ್ದೆಯಲ್ಲಿ 15 ವರ್ಷದ ಬಾಲಕಿ ಮೇಲೆ 22 ವರ್ಷದ ಯುವಕ ಅತ್ಯಾಚಾರ ಎಸಗಿದ್ದಾನೆ.
ಐಪಿಸಿ ಸೆಕ್ಷನ್ 376 ಮತ್ತು 120 ಬಿ ಅಡಿಯಲ್ಲಿ ಆರೋಪಿಗಳ ವಿರುದ್ಧ ಪ್ರಕರಣ ದಾಖಲಾಗಿದೆ. ಇನ್ನೂ ಇವರೆಲ್ಲರೂ ತಲೆಮರೆಸಿಕೊಂಡಿದ್ದು, ಶೋಧ ಕಾರ್ಯ ನಡೆಯುತ್ತಿದೆ ಎಂದು ಎಸ್‌ಎಚ್‌ಒ ಮನೋಜ್ ಚಾಹಲ್ ಮಾಹಿತಿ ನೀಡಿದ್ದಾರೆ.
ಸಂತ್ರಸ್ತೆಯ ತಂದೆ ನೀಡಿದ ದೂರಿನಲ್ಲಿ, ನನ್ನ ಮಗಳು ತನ್ನ 10 ವರ್ಷದ ಸಹೋದರಿಯೊಂದಿಗೆ ಜಮೀನಿಗೆ ಹೋಗಿದ್ದಳು. ಆಗ ಮೂವರು ಯುವಕರು ಆಕೆಯನ್ನು ಕಬ್ಬಿನ ಹೊಲಕ್ಕೆ ಬಲವಂತವಾಗಿ ಕರೆದೊಯ್ದು ಅತ್ಯಾಚಾರ ಮಾಡಿದ್ದಾರೆ ಎಂದು ಸಂತ್ರಸ್ತೆಯ ತಂದೆ ದೂರಿನಲ್ಲಿ ಆರೋಪಿಸಿದ್ದಾರೆ.