ETV Bharat / bharat

ಭಿವಂಡಿ ಕಟ್ಟಡ ದುರಂತ: 20ಕ್ಕೆ ಏರಿದ ಸಾವಿನ ಸಂಖ್ಯೆ - ಭಿವಂಡಿ ಕಟ್ಟಡ ಕುಸಿತ ಪ್ರಕರಣ

ಮಹಾರಾಷ್ಟ್ರದಲ್ಲಿನ ಕಟ್ಟಡ ಕುಸಿತ ಪ್ರಕರಣದಲ್ಲಿ ಸಾವನ್ನಪ್ಪಿದವರ ಸಂಖ್ಯೆ 20ಕ್ಕೆ ಏರಿಕೆಯಾಗಿದೆ.

Bhiwandi building collapse
ಭಿವಂಡಿ ಕಟ್ಟಡ ದುರಂತ
author img

By

Published : Sep 22, 2020, 7:08 AM IST

Updated : Sep 22, 2020, 8:43 AM IST

ಭಿವಂಡಿ(ಮಹಾರಾಷ್ಟ್ರ): ಥಾಣೆ ಜಿಲ್ಲೆಯ ಭಿವಂಡಿಯಲ್ಲಿ ಮೂರು ಅಂತಸ್ತಿನ ಕಟ್ಟಡ ಕುಸಿತ ಘಟನೆಯಲ್ಲಿ ಸಾವಿನ ಸಂಖ್ಯೆ 20ಕ್ಕೆ ಏರಿಕೆಯಾಗಿದೆ ಎಂದು ಎನ್​ಡಿಆರ್​ಎಫ್ ಮೂಲಗಳು ತಿಳಿಸಿವೆ.

ಭಿವಂಡಿ ಪಟ್ಟಣದ ಪಟೇಲ್​ ಕಾಂಪೌಂಡ್ ಪ್ರದೇಶದಲ್ಲಿ ದುರ್ಘಟನೆ ನಡೆದಿದ್ದು, 21 ಫ್ಲ್ಯಾಟ್​​ಗಳಿದ್ದ ಜಿಲಾನಿ ಹೆಸರಿನ ಕಟ್ಟಡ ಕುಸಿದು ಅವಘಡ ಸಂಭವಿಸಿತ್ತು. 1984ರಲ್ಲಿ ನಿರ್ಮಾಣವಾಗಿದ್ದ ಈ ಕಟ್ಟಡ ದುರ್ಬಲವಾಗಿತ್ತು ಎಂದು ಹೇಳಲಾಗಿದೆ.

ಪ್ರಕರಣದ ತನಿಖೆಗೆಗಾಗಿ ಥಾಣೆ ಜಿಲ್ಲೆಯ ಹೆಚ್ಚುವರಿ ಆಯುಕ್ತ ಓಂಪ್ರಕಾಶ್​ ದಿವ್ತೆ ನೇತೃತ್ವದಲ್ಲಿ ಸಮಿತಿಯೊಂದನ್ನು ರಚಿಸಲಾಗಿದೆ. ಈಗಾಗಲೇ ಇಬ್ಬರು ಸರ್ಕಾರಿ ಅಧಿಕಾರಿಗಳನ್ನು ಈ ವಿಚಾರವಾಗಿ ವಜಾಗೊಳಿಸಲಾಗಿದ್ದು, ಕಟ್ಟಡದ ಮಾಲೀಕನ ವಿರುದ್ಧ ದೂರು ದಾಖಲಿಸಿಕೊಳ್ಳಲಾಗಿದೆ.

Last Updated : Sep 22, 2020, 8:43 AM IST
ETV Bharat Logo

Copyright © 2025 Ushodaya Enterprises Pvt. Ltd., All Rights Reserved.