ಉತ್ತರ ಪ್ರದೇಶ : ಕುಡಿದ ನಶೆಯಲ್ಲಿ ಇಬ್ಬರು ಸೇರಿಕೊಂಡು ಮನೆಯೊಂದಕ್ಕೆ ಬೆಂಕಿ ಹಚ್ಚಿದಲ್ಲದೆ ಮನೆಯ ಸದಸ್ಯರ ಮೇಲೆ ಗುಂಡು ಹಾರಿಸಿದ ಘಟನೆ ಕಾಸ್ಗಂಜ್ ನಗರದಲ್ಲಿ ನಡೆದಿದೆ.
ಕಾಸ್ಗಂಜ್ನ ಗೆಂಡುಪುರ ಗ್ರಾಮದಲ್ಲಿ ಈ ಘಟನೆ ನಡೆದಿದ್ದು, ಮನೋಜ್ ಎಂಬಾತನ ಮನೆಗೆ ಕುಡಿದ ನಶೆಯಲ್ಲಿ ಬಂದಿದ್ದ ಇಬ್ಬರು ವ್ಯಕ್ತಿಗಳನ್ನು ಮನೆಯೊಳಗೆ ಸೇರಿಸಿಕೊಳ್ಳಲು ನಿರಾಕರಿಸಿದ್ದಕ್ಕೆ ಬೆಂಕಿ ಹಚ್ಚಿದ್ದಾರೆ.
ಇಷ್ಟೇ ಅಲ್ಲದೆ, ಮರುದಿನ ಬೆಳಗ್ಗೆ ಮನೋಜ್ ಮನೆಯವರು ಜಮೀನಿಗೆ ತೆರಳುತ್ತಿದ್ದಾಗ ಗುಂಡು ಹಾರಿಸಿದ್ದಾರೆ. ಘಟನೆಯಲ್ಲಿ ಘಟನೆಯಲ್ಲಿ ಓರ್ವ ಮಹಿಳೆ ಸೇರಿದಂತೆ ನಾಲ್ವರು ಗಾಯಗೊಂಡಿದ್ದಾರೆ. ಗಾಯಾಳುಗಳನ್ನು ಸ್ಥಳೀಯ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಿ, ಹೆಚ್ಚಿನ ಚಿಕಿತ್ಸೆಗಾಗಿ ಅಲೀಘಡ್ಗೆ ಕರೆದೊಯ್ಯಲಾಗಿದೆ.
ಆರೋಪಿಗಳ ವಿರುದ್ಧ ಎಫ್ಐಆರ್ ದಾಖಲಿಸಿರುವ ಪೊಲೀಸರು ಬಂಧನಕ್ಕೆ ಬಲೆ ಬೀಸಿದ್ದಾರೆ.