ETV Bharat / bharat

ಮಗಳ ಮೇಲೆ ತಂದೆಯಿಂದ ಅತ್ಯಾಚಾರ... ಅಪ್ರಾಪ್ತೆ ಗರ್ಭಿಣಿ - ಉತ್ತರ ಪ್ರದೇಶದಲ್ಲಿ ಅತ್ಯಾಚಾರ ಪ್ರಕರಣ

ಉತ್ತರ ಪ್ರದೇಶದಲ್ಲಿ ತಂದೆನೇ ತನ್ನ ಮಗಳ ಮೇಲೆ ಹೇಯ ಕೃತ್ಯ ಎಸಗಿರುವ ಘಟನೆ ಬೆಳಕಿಗೆ ಬಂದಿದೆ. ಪರಿಣಾಮ ಬಾಲಕಿ ಗರ್ಭಿಣಿಯಾಗಿದ್ದಾಳೆ.

man-rapes daughter
ಮಗಳ ಮೇಲೆ ತಂದೆಯಿಂದ ಅತ್ಯಾಚಾರ
author img

By

Published : Oct 1, 2020, 4:23 AM IST

ಬಾರಾಬಂಕಿ (ಉತ್ತರ ಪ್ರದೇಶ): ಹತ್ರಾಸ್ ಅತ್ಯಾಚಾರ ಪ್ರಕರಣ ವಿರುದ್ಧ ಎಲ್ಲೆಡೆ ತೀವ್ರ ಆಕ್ರೋಶ ವ್ಯಕ್ತವಾಗಿರುವ ಬೆನ್ನಲ್ಲೇ ಉತ್ತರ ಪ್ರದೇಶದ ಬಾರಾಬಂಕಿಯಲ್ಲಿ ಮತ್ತೊಂದು ರೇಪ್ ಪ್ರಕರಣ ಬೆಳಕಿಗೆ ಬಂದಿದೆ.

16 ವರ್ಷದ ಮಗಳ ಮೇಲೆಯೇ ಪಾಪಿ ತಂದೆಯೋರ್ವ 1ವರ್ಷದಿಂದ ಅತ್ಯಾಚಾರ ನಡೆಸಿ, ಗರ್ಭಿಣಿಯನ್ನಾಗಿಸಿದ್ದಾನೆ. ಫತೇಪುರ್ ಪೊಲೀಸ್ ಠಾಣಾ ವ್ಯಾಪ್ತಿಯ ಗ್ರಾಮವೊಂದರಲ್ಲಿ ಈ ಹೇಯ ಕೃತ್ಯ ನಡೆದಿದೆ.

ಅನಾರೋಗ್ಯದ ಹಿನ್ನೆಲೆ ಬಾಲಕಿಯನ್ನು ವೈದ್ಯಕೀಯ ತಪಾಸಣೆಗೆ ಒಳಪಡಿಸಿದಾಗ ಆಕೆ ಗರ್ಭಿಣಿಯಾಗಿರುವುದು ಬೆಳಕಿಗೆ ಬಂದಿದೆ. ಬಳಿಕ ಬಾಲಕಿ ತನ್ನ ಚಿಕ್ಕಮ್ಮನ ಜೊತೆ ಫತೇಪುರ್ ಪೊಲೀಸ್ ಠಾಣೆಗೆ ತೆರಳಿ, ತಂದೆಯ ವಿರುದ್ಧ ದೂರು ದಾಖಲಿಸಿದ್ದಾಳೆ.

ತಕ್ಷಣವೇ ಪೊಲೀಸರು ಪ್ರಕರಣ ದಾಖಲಿಸಿಕೊಂಡು, ಆರೋಪಿಗಾಗಿ ಹುಡುಕಾಟ ನಡೆಸಿದ್ದಾರೆ. ಆದ್ರೆ ಆರೋಪಿ ತಲೆಮರೆಸಿಕೊಂಡಿದ್ದು, ಈವರೆಗೆ ಸಿಕ್ಕಿಲ್ಲ ಎಂದು ವರದಿಯಾಗಿದೆ.

ETV Bharat Logo

Copyright © 2025 Ushodaya Enterprises Pvt. Ltd., All Rights Reserved.