ಕುಶಿನಗರ: ಲವ್ ಜಿಹಾದ್ ವಿರುದ್ಧ ಉತ್ತರಪ್ರದೇಶ ಸರ್ಕಾರವು ಕಠಿಣ ಕಾನೂನು ಸಮರ ಸಾರಿದ್ದು, ಕಾನೂನು ಉಲ್ಲಂಘಿಸುವವರ ವಿರುದ್ಧ ದೂರು ದಾಖಲಿಸುತ್ತಿದೆ.
ಲವ್ ಜಿಹಾದ್ ವಿರುದ್ಧ ಕಠಿಣ ಕಾನೂನು ತಂದ ಬಳಿಕವೂ ಅನೇಕ ಘಟನೆಗಳು ನಡೆಯುತ್ತಿದ್ದು, ಕುಶಿನಗರದಲ್ಲಿ ಲವ್ ಜಿಹಾದ್ ಪ್ರಕರಣಕ್ಕೆ ಸಂಬಂಧಿಸಿದಂತೆ ಕಿಕಿಯಾ ಪೊಲೀಸರು ಮಂಗಳವಾರ ರಾತ್ರಿ ನಿಖಾವನ್ನು ನಿಲ್ಲಿಸಿದ್ದು, ವಧು, ವರ ಮತ್ತು ಸಂಬಂಧಿಕರನ್ನು ಠಾಣೆಗೆ ಕರೆದೊಯ್ದು ತನಿಖೆ ನಡೆಸುತ್ತಿದ್ದಾರೆ.
ಮೂಲಗಳ ಪ್ರಕಾರ, ಅರ್ಮಾನ್ ಖಾನ್ ಎಂಬ ವ್ಯಕ್ತಿಯು, ಮೌಲ್ವಿಯ ಬಳಿ ತನ್ನ ವಿವಾಹವನ್ನು ರಹಸ್ಯವಾಗಿ ನಡೆಸಿಕೊಡುವಂತೆ ಕೋರಿದ್ದನು ಎನ್ನಲಾಗಿದೆ. ಈ ವಿಷಯ ಗ್ರಾಮಸ್ಥರಿಗೆ ತಿಳಿದಿದ್ದು, ಅವರು ಸ್ಥಳೀಯ ಪೊಲೀಸ್ ಠಾಣೆಗೆ ಮಾಹಿತಿ ನೀಡಿದ್ದಾರೆ.
ಇನ್ನು ಜೊತೆಗೆ ಸ್ಥಳದಲ್ಲಿ ಹಾಜರಿದ್ದ ಎಲ್ಲರನ್ನು ವಿಚಾರಣೆಗಾಗಿ ಪೊಲೀಸ್ ಠಾಣೆಗೆ ಕರೆದೊಯ್ಯಲಾಗಿದ್ದು, ತನಿಖೆ ಮುಂದುವರೆದಿದೆ.