ಚಮೋಲಿ: ಉತ್ತರಾಖಂಡದ ಚಮೋಲಿಯಲ್ಲಿ ಭಾನುವಾರ ಸಂಭವಿಸಿದ ಹಿಮಪ್ರವಾಹ ರಾಜ್ಯವನ್ನೇ ತಲ್ಲಣಗೊಳಿಸಿದೆ. ಮೂರನೇ ದಿನವೂ ರಕ್ಷಣಾ ಕಾರ್ಯಾಚರಣೆ ಮುಂದುವರೆದಿದೆ.
ತಪೋವನ್‌ನಲ್ಲಿರುವ ನ್ಯಾಷನಲ್ ಥರ್ಮಲ್ ಪವರ್ ಕಾರ್ಪೊರೇಶನ್ ಲಿಮಿಟೆಡ್ನ (ಎನ್‌ಟಿಪಿಸಿ) ವಿದ್ಯುತ್ ಯೋಜನೆ ಹಾಗೂ ಸುರಂಗದೊಳಗೆ ಐಟಿಬಿಪಿ, ಎನ್ಡಿಆರ್ಎಫ್, ಎಸ್ಡಿಆರ್ಎಫ್ ತಂಡಗಳು ಕಾರ್ಯಾಚರಣೆ ನಡಸುತ್ತಿವೆ. ಸುರಂಗದೊಳಗೆ ಸಿಲುಕಿದ್ದ ಕೆಲವರನ್ನು ರಕ್ಷಿಸಲಾಗಿದ್ದು, ಇನ್ನೂ ಅಲ್ಲಿ 35 ಜನರು ಸಿಲುಕಿದ್ದಾರೆ ಎಂದು ಉತ್ತರಾಖಂಡ ಡಿಜಿಪಿ ತಿಳಿಸಿದ್ದಾರೆ.
ಈವರೆಗೆ 26 ಮಂದಿಯ ಮೃತದೇಹಗಳು ಪತ್ತೆಯಾಗಿದ್ದು, 171 ಮಂದಿ ನಾಪತ್ತೆಯಾಗಿದ್ದಾರೆ. ಘಟನೆಯಲ್ಲಿ ಗಾಯಗೊಂಡವರನ್ನು ಜೋಶಿಮಠದ ಐಟಿಬಿಪಿ ಆಸ್ಪತ್ರೆಯಲ್ಲಿ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದ್ದು, ಗಾಯಾಳುಗಳನ್ನು ಉತ್ತರಾಖಂಡ ಮುಖ್ಯಮಂತ್ರಿ ತ್ರಿವೇಂದ್ರ ಸಿಂಗ್ ರಾವತ್ ಭೇಟಿ ಮಾಡಿದ್ದಾರೆ.
ಭೇಟಿ ಬಳಿಕ ಹಾನಿಗೊಳಗಾದ ಪ್ರದೇಶಗಳ ವೈಮಾನಿಕ ಸಮೀಕ್ಷೆಯನ್ನು ಸಿಎಂ ತ್ರಿವೇಂದ್ರ ಸಿಂಗ್ ಕೈಗೊಂಡಿದ್ದಾರೆ.