ನವದೆಹಲಿ: ದೇಶದಲ್ಲಿ ಲಾಕ್ಡೌನ್ ಹೇರಿಕೆ ಮಾಡಿರುವ ಕಾರಣ ಕೆಲವೊಬ್ಬರು ತಮ್ಮ ತಮ್ಮ ಊರುಗಳಿಗೆ ವಾಪಸ್ ಆಗದಂತಹ ಸ್ಥಿತಿ ನಿರ್ಮಾಣಗೊಂಡಿದೆ. ಇದರ ಮಧ್ಯೆ ಮಹಿಳಾ ಪೊಲೀಸ್ ಪೇದೆಯೊಬ್ಬರು ದೆಹಲಿಯಲ್ಲೇ ಡ್ಯೂಟಿ ಮಾಡುವಂತಹ ಸ್ಥಿತಿ ನಿರ್ಮಾಣಗೊಂಡಿದೆ.
ಉತ್ತರಪ್ರದೇಶದ ಉತ್ತಮನಗರ ಪೊಲೀಸ್ ಠಾಣೆಯಲ್ಲಿ ಪೊಲೀಸ್ ಪೇದೆಯಾಗಿದ್ದ ಮಹಿಳೆ ಕಳೆದ ಕೆಲ ತಿಂಗಳ ಹಿಂದೆ ಗಂಡನ ಭೇಟಿ ಮಾಡುವ ಉದ್ದೇಶದಿಂದ ದೆಹಲಿಗೆ ಹೋಗಿದ್ದರು. ಈ ವೇಳೆ ಲಾಕ್ಡೌನ್ ಹೇರಿಕೆ ಮಾಡಿದ್ದರಿಂದ ವಾಪಸ್ ಬರಲು ಆಗದಂತಹ ಸ್ಥಿತಿ ನಿರ್ಮಾಣಗೊಂಡಿದೆ. ಹೀಗಾಗಿ ಅವರು ಅಲ್ಲೇ ಕರ್ತವ್ಯ ನಿರ್ವಹಿಸುತ್ತಿದ್ದಾರೆ. ಅಲ್ಲೇ ಡ್ಯೂಟಿ ಮಾಡುವಂತೆ ಉತ್ತರಪ್ರದೇಶ ಪೊಲೀಸ್ ಇಲಾಖೆ ಸೂಚನೆ ನೀಡಿದ್ದು, ಅದರಂತೆ ಕರ್ತವ್ಯ ನಿರ್ವಹಿಸುತ್ತಿರುವುದಾಗಿ ತಿಳಿಸಿದ್ದಾರೆ.
ಪ್ರತಿದಿನ ಕರ್ತವ್ಯಕ್ಕೆ ಹಾಜರಾಗುತ್ತಿರುವ ಮಹಿಳಾ ಪೊಲೀಸ್ ಪೇದೆ ತಮ್ಮ ಕೆಲಸದ ಬಗ್ಗೆ ಹೆಮ್ಮೆ ಇದೆ ಎಂದು ಹೇಳಿಕೊಳ್ಳುತ್ತಿದ್ದಾರೆ.