ETV Bharat / bharat

ಸಂಕ್ರಾಂತಿಗೆ ಕೇಂದ್ರದ ಭರ್ಜರಿ ಗಿಫ್ಟ್​: ಜ.16ರಿಂದ ದೇಶಾದ್ಯಂತ ಕೊರೊನಾ ಲಸಿಕೆ ಹಂಚಿಕೆ - COVID vaccine news

Covid Vaccination
Covid Vaccination
author img

By

Published : Jan 9, 2021, 4:36 PM IST

Updated : Jan 9, 2021, 5:05 PM IST

16:33 January 09

ಸಂಕ್ರಾಂತಿಗೆ ದೇಶದ ಜನರಿಗೆ ಸಿಕ್ತು ಮಹತ್ವದ ಗಿಫ್ಟ್​

  • PM Modi chaired a high-level meeting to review status of #COVID-19 in the country along with preparedness of the State/UTs for COVID vaccination, today. Meeting was attended by Cabinet Secretary, Principal Secretary to PM, Health Secretary, & other senior officials: Govt of India https://t.co/grfgIRk6wt

    — ANI (@ANI) January 9, 2021 " class="align-text-top noRightClick twitterSection" data=" ">

ನವದೆಹಲಿ: ಸಂಕ್ರಾಂತಿ ಹಬ್ಬಕ್ಕೆ ಕೇಂದ್ರ ಸರ್ಕಾರ ದೇಶದ ಜನರಿಗೆ ಭರ್ಜರಿ ಗಿಫ್ಟ್​ ನೀಡಿದ್ದು, ಜನವರಿ 16ರಿಂದ ದೇಶಾದ್ಯಂತ ಕೊರೊನಾ ಲಸಿಕೆ ಹಂಚಿಕೆ ಮಾಡಲು ನಿರ್ಧರಿಸಿದೆ. ಇದಕ್ಕೆ ಸಂಬಂಧಿಸಿದಂತೆ ಇಂದು ಪ್ರಧಾನಿ ನರೇಂದ್ರ ಮೋದಿ ಉನ್ನತ ಮಟ್ಟದ ಸಭೆ ನಡೆಸಿದರು.

 ಓದಿ: ಕೋವಿಡ್​ ಮೊದಲ ಚುಚ್ಚುಮದ್ದು ಪಡೆದ ಸೌದಿ ಅರೇಬಿಯಾ ದೊರೆ ಸಲ್ಮಾನ್​!

ಮೊದಲ ಹಂತದಲ್ಲಿ ದೇಶದಲ್ಲಿ 3 ಕೋಟಿ ವಾರಿಯರ್ಸ್​ಗೆ ಕೊರೊನಾ ಲಸಿಕೆ ನೀಡಲು ನಿರ್ಧರಿಸಲಾಗಿದ್ದು, ತದನಂತರ 50 ವರ್ಷ ಮೇಲ್ಪಟ್ಟವರಿಗೆ ಈ ಲಸಿಕೆ ನೀಡಲಾಗುವುದು ಎಂದು ಕೇಂದ್ರ ಸರ್ಕಾರ ಮಾಹಿತಿ ನೀಡಿದೆ. ಆರಂಭದಲ್ಲಿ ಆರೋಗ್ಯ ಕಾರ್ಯಕರ್ತರು, ಫ್ರಂಟ್​ಲೈನ್​ ಸಿಬ್ಬಂದಿ ಈ ಲಸಿಕೆ ಪಡೆದುಕೊಳ್ಳಲಿದ್ದಾರೆ.

ಲಸಿಕೆ ಹಂಚಿಕೆ ವಿಚಾರವಾಗಿ ಪ್ರಧಾನಿ ನರೇಂದ್ರ ಮೋದಿ ಇಂದು ಉನ್ನತ ಮಟ್ಟದ ಸಭೆ ನಡೆಸುತ್ತಿದ್ದು, ಆರೋಗ್ಯ ಇಲಾಖೆ ಕಾರ್ಯದರ್ಶಿ, ಕೇಂದ್ರ ಸಚಿವ ಸಂಪುಟದ ಕಾರ್ಯದರ್ಶಿ, ಪ್ರಧಾನಿ ಮುಖ್ಯ ಕಾರ್ಯದರ್ಶಿ ಸೇರಿದಂತೆ ಕೆಲ ಹಿರಿಯ ಅಧಿಕಾರಿಗಳು ಇದರಲ್ಲಿ ಭಾಗಿಯಾಗಿದ್ದಾರೆ. ಇದುವರೆಗೆ ದೇಶದಲ್ಲಿ 79 ಲಕ್ಷ ಫಲಾನುಭವಿಗಳು ಕೊರೊನಾ ಲಸಿಕೆ ಪಡೆದುಕೊಳ್ಳಲು ತಮ್ಮ ಹೆಸರು ನೋಂದಣಿ ಮಾಡಿಕೊಂಡಿದ್ದಾರೆ. ಕೋವಿನ್​ ಆ್ಯಪ್​ನಲ್ಲಿ ತಮ್ಮ ಹೆಸರು ನೋಂದಣಿ ಮಾಡಿಸಿಕೊಂಡಿದ್ದಾರೆ.

ದೇಶದಲ್ಲಿ 27 ಕೋಟಿ ಕೊರೊನಾ ಲಸಿಕೆ ನೀಡಲು ಕೇಂದ್ರ ಸರ್ಕಾರ ನಿರ್ಧಾರ ಮಾಡಿದೆ. ಸೋಮವಾರ ಸಂಜೆ ಪ್ರಧಾನಿ ನರೇಂದ್ರ ಮೋದಿ ಇದೇ ವಿಚಾರವಾಗಿ ಎಲ್ಲ ರಾಜ್ಯ ಹಾಗೂ ಕೇಂದ್ರಾಡಳಿತ ಪ್ರದೇಶದ ಸಿಎಂಗಳೊಂದಿಗೆ ಮಹತ್ವದ ಸಭೆ ನಡೆಸಲಿದ್ದು, ಕೆಲವೊಂದು ಸೂಚನೆ ನೀಡುವ ಸಾಧ್ಯತೆ ಇದೆ.

Last Updated : Jan 9, 2021, 5:05 PM IST
ETV Bharat Logo

Copyright © 2025 Ushodaya Enterprises Pvt. Ltd., All Rights Reserved.