ETV Bharat / bharat

ದೆಹಲಿಯ ಡಿಎಸ್​​ಸಿಐ ಆಸ್ಪತ್ರೆಯಲ್ಲಿ ಲಸಿಕೆ ಪಡೆಯುವವರ ಸಂಖ್ಯೆಯಲ್ಲಿ ಹೆಚ್ಚಳ

ದೆಹಲಿ ರಾಜ್ಯ ಕ್ಯಾನ್ಸರ್ ಸಂಸ್ಥೆಯಲ್ಲಿ ವ್ಯಾಕ್ಸಿನೇಷನ್ ಹೆಚ್ಚಿಸುವ ಸಲುವಾಗಿ ಇಲ್ಲಿನ ವೈದ್ಯರು ಪರಿಣಾಮಕಾರಿಯಾದ ಕ್ರಮಗಳನ್ನು ಕೈಗೊಂಡಿದ್ದಾರೆ. ಇದರಿಂದ ಲಸಿಕೆ ಪಡೆದುಕೊಳ್ಳುವವರ ಸಂಖ್ಯೆಯೂ ಏರಿಕೆಯಾಗಿದೆ.

ದೆಹಲಿಯ ಡಿಎಸ್​​ಸಿಐ ಆಸ್ಪತ್ರೆಯಲ್ಲಿ ಲಸಿಕೆ ಪಡೆಯುವವರ ಸಂಖ್ಯೆಯಲ್ಲಿ ಹೆಚ್ಚಳ
Vaccination increased at Delhi DSCI Hospital
author img

By

Published : Jan 22, 2021, 8:56 AM IST

ನವದೆಹಲಿ: ದೆಹಲಿಯ ರಾಜ್ಯ ಕ್ಯಾನ್ಸರ್ ಸಂಸ್ಥೆ ವ್ಯಾಕ್ಸಿನೇಷನ್ ಪಡೆಯುವವರ ಸಂಖ್ಯೆಯನ್ನು ಹೆಚ್ಚಿಸುವ ಸಲುವಾಗಿ ಪರಿಣಾಮಕಾರಿಯಾದ ಕ್ರಮಗಳನ್ನು ಕೈಗೊಂಡಿದೆ. ಇದರಿಂದ ಆಸ್ಪತ್ರೆಯಲ್ಲಿ ಲಸಿಕೆ ಪಡೆಯುವವರ ಸಂಖ್ಯೆಯೂ ಎರಡೂವರೆ ಪಟ್ಟು ಹೆಚ್ಚಾಗಿದೆ.

ದೆಹಲಿಯ ಡಿಎಸ್​​ಸಿಐ ಆಸ್ಪತ್ರೆಯಲ್ಲಿ ಲಸಿಕೆ ಪಡೆಯುವವರ ಸಂಖ್ಯೆಯಲ್ಲಿ ಹೆಚ್ಚಳ

ವ್ಯಾಕ್ಸಿನೇಷನ್ ಕುರಿತಂತೆ ವೈದ್ಯರು ಸಮಾಲೋಚನೆ ನಡೆಸಿದ್ದು, ಇದರ ಪರಿಣಾಮದಿಂದ ಇಲ್ಲಿನ ಆಸ್ಪತ್ರೆಯಲ್ಲಿ ದಿನದಿಂದ ದಿನಕ್ಕೆ ಲಸಿಕೆ ಪಡೆಯುವವರ ಸಂಖ್ಯೆಯಲ್ಲಿ ಏರಿಕೆಯಾಗುತ್ತಿದೆ. ಜ.16ರಂದು ಸುಮಾರು 46 ಜನರಿಗೆ, ಜ.18ರಂದು 19 ಜನರಿಗೆ, ಜ.21 ರಂದು ಸುಮಾರು 19 ಜನರಿಗೆ ವ್ಯಾಕ್ಸಿನೇಷನ್ ನೀಡಲಾಗಿದೆ.

ಆಸ್ಪತ್ರೆಯಲ್ಲಿ ಲಸಿಕೆ ಪಡೆಯುವವರ ಪಟ್ಟಿಯಲ್ಲಿ ಕೊಂಚ ಬದಲಾವಣೆ ಮಾಡಲಾಗಿದ್ದು, ಮೊದಲು ಲಸಿಕೆ ಪಡೆಯುತ್ತಿರುವ ಆರೋಗ್ಯ ಕಾರ್ಯಕರ್ತರು ತಮ್ಮ ಅನುಕೂಲಕ್ಕೆ ಅನುಗುಣವಾಗಿ ಯಾವ ದಿನ ಬೇಕಾದರೂ ಲಸಿಕೆ ಪಡೆಯಲು ಅನುಮತಿ ನೀಡಲಾಗಿದೆ. ಅಷ್ಟೇ ಅಲ್ಲದೆ ಜನರನ್ನು ಪ್ರೋತ್ಸಾಹಿಸುವ ಹಿನ್ನೆಲೆಯಲ್ಲಿ ಪ್ರಮಾಣಪತ್ರ ನೀಡುವಂತಹ ವ್ಯವಸ್ಥೆಯನ್ನು ಈ ಆಸ್ಪತ್ರೆಯಲ್ಲಿ ಮಾಡಲಾಗಿದೆ.

ETV Bharat Logo

Copyright © 2024 Ushodaya Enterprises Pvt. Ltd., All Rights Reserved.