ಅಮೃತಸರ: ಜಲಿಯನ್‌ವಾಲಾ ಬಾಗ್ ಹತ್ಯಾಕಾಂಡ ನಡೆದು ಇಂದಿಗೆ ನೂರು ವರ್ಷವಾಗುತ್ತಿದ್ದು, ಅಮೃತಸರದಲ್ಲಿ ನಡೆಯುವ ಕಾರ್ಯಕ್ರಮದಲ್ಲಿ ಉಪರಾಷ್ಟ್ರಪತಿ ವೆಂಕಯ್ಯ ನಾಯ್ಡು ಮತ್ತು ಎಐಸಿಸಿ ಅಧ್ಯಕ್ಷ ರಾಹುಲ್ ಗಾಂಧಿ ಪಾಲ್ಗೊಳ್ಳಲಿದ್ದಾರೆ.

ಜಲಿಯನ್ ವಾಲಾ ಬಾಗ್ ರಾಷ್ಟ್ರೀಯ ಸ್ಮಾರಕ ಟ್ರಸ್ಟ್ನ ಸದಸ್ಯರಾಗಿರುವ ಪಂಜಾಬ್ ಬಿಜೆಪಿ ಅಧ್ಯಕ್ಷ ಶ್ವೈತ್ ಮಲಿಕ್ ಈ ಬಗ್ಗೆ ಮಾಹಿತಿ ನೀಡಿದ್ದಾರೆ. ಈ ನರಮೇಧದಲ್ಲಿ ಹತ್ಯೆಯಾದವರಿಗೆ ವೆಂಕಯ್ಯ ನಾಯ್ಡು ವಿಶೇಷ ಪ್ರಾರ್ಥನೆ ಸಲ್ಲಿಸಲಿದ್ದಾರೆ. ಇದೇ ವೇಳೆ ಅಂಚೆ ಚೀಟಿ ಮತ್ತು ನಾಣ್ಯವನ್ನ ಬಿಡುಗಡೆ ಮಾಡಲಿದ್ದಾರೆ ಎಂದು ಮಾಹಿತಿ ನೀಡಿದ್ದಾರೆ.

ಇನ್ನು ನಿನ್ನೆಯಷ್ಟೆ ಪಂಜಾಬ್ಗೆ ಆಗಮಿಸಿರುವ ಎಐಸಿಸಿ ಅಧ್ಯಕ್ಷ ರಾಹುಲ್ ಗಾಂಧಿ, ಮುಖ್ಯಮಂತ್ರಿ ಕ್ಯಾಪ್ಟನ್ ಅಮರೀಂದರ್ ಸಿಂಗ್ ಜೊತೆ ಗೋಲ್ಡನ್ ಟೆಂಪಲ್ಗೆ ಭೇಟಿ ನೀಡಿ ವಿಶೇಷ ಪ್ರಾರ್ಥನೆ ಸಲ್ಲಿಸಿದ್ದಾರೆ. ಅಲ್ಲದೆ ಇಂದು ನಡೆಯುವ ಕಾರ್ಯಕ್ರಮದಲ್ಲಿ ರಾಹುಲ್ ಪಾಲ್ಗೊಳ್ಳಲಿದ್ದಾರೆ ಎಂದು ತಿಳಿದುಬಂದಿದೆ.