ETV Bharat / bharat

ಮಧ್ಯಪ್ರದೇಶದಲ್ಲಿ ವಿಶ್ವ ಹಿಂದೂ ಪರಿಷತ್​ ಮುಖಂಡನ ಭೀಕರ ಹತ್ಯೆ: ವಿಡಿಯೋ

ಕಾರಿನಲ್ಲಿ ಹೋಗುತ್ತಿದ್ದ ವಿಶ್ವ ಹಿಂದೂ ಪರಿಷತ್​ ಮುಖಂಡನನ್ನು ಅಡ್ಡಗಟ್ಟಿದ ದುಷ್ಕರ್ಮಿಗಳ ಗುಂಪು ದಾಳಿ ನಡೆಸಿ, ಆತನನ್ನು ಅತ್ಯಂತ ಬರ್ಬರವಾಗಿ ಕೊಲೆ ಮಾಡಿರುವ ಘಟನೆ ನಡೆದಿದೆ.

VHP leader Ravi Vishwakarma
VHP leader Ravi Vishwakarma
author img

By

Published : Jun 27, 2020, 6:00 PM IST

ಹೋಶಂಗಾಬಾದ್​(ಮಧ್ಯಪ್ರದೇಶ): ವಿಶ್ವ ಹಿಂದೂ ಪರಿಷತ್​​ನ ಮುಖಂಡನನ್ನು ನಡು ರಸ್ತೆಯಲ್ಲಿ ಭೀಕರವಾಗಿ ಹತ್ಯೆ ಮಾಡಿರುವ ಘಟನೆ ಮಧ್ಯಪ್ರದೇಶದ ಹೋಶಂಗಾಬಾದ್​​ನಲ್ಲಿ ನಡೆದಿದೆ.

ಮಧ್ಯಪ್ರದೇಶದಲ್ಲಿ ವಿಶ್ವ ಹಿಂದೂ ಪರಿಷತ್​ ಮುಖಂಡನ ಭೀಕರ ಹತ್ಯೆ

ರವಿ ವಿಶ್ವಕರ್ಮ್​ ಹತ್ಯೆಯಾದ ವಿಹೆಚ್‌ಪಿ ಮುಖಂಡ. ದುಷ್ಕರ್ಮಿಗಳ ಗುಂಪು ಅವರ ಕಾರಿನ ಮೇಲೆ ದಾಳಿ ಮಾಡಿ ಭೀಕರವಾಗಿ ಕೊಲೆಗೈದಿದೆ. ಅದೇ ರಸ್ತೆಯಲ್ಲಿ ಹೋಗುತ್ತಿದ್ದ ಕಾರು ಚಾಲಕನೋರ್ವ ಭಯಾನಕ ಕೃತ್ಯದ ವಿಡಿಯೋ ಸೆರೆ ಹಿಡಿದಿದ್ದಾನೆ.

ನಿನ್ನೆ ಸಂಜೆ 6 ಗಂಟೆಯ ವೇಳೆಗೆ ಈ ಘಟನೆ ನಡೆದಿದೆ. ರವಿ ತನ್ನ ಸ್ನೇಹಿತನೊಂದಿಗೆ ಕಾರಿನಲ್ಲಿ ತೆರಳುತ್ತಿದ್ದ ವೇಳೆ ದುಷ್ಕರ್ಮಿಗಳು ಏಕಾಏಕಿ ಆತನ ಕಾರಿನ ಮೇಲೆ ದಾಳಿ ನಡೆಸಿದ್ದಾರೆ. ಮೊದಲು ರಾಡ್​ನಿಂದ ಹಲ್ಲೆ ಮಾಡಿರುವ ದುಷ್ಕರ್ಮಿಗಳ ಗುಂಪು ತಂದನಂತರ ಗುಂಡು ಹಾರಿಸಿದ್ದಾರೆ.

Ravi Vishwakarma
ಕೊಲೆಯಾದ ವಿಶ್ವ ಹಿಂದೂ ಪರಿಷತ್​ ಮುಖಂಡ ರವಿ

ರಾಜಕೀಯ ನಾಯಕರೊಂದಿಗೆ ಗುರುತಿಸಿಕೊಂಡಿದ್ದ ರವಿ, ಬಿಲ್ಡಿಂಗ್​ ಕಾಂಟ್ರಾಕ್ಟರ್​ ಆಗಿ ಕೆಲಸ ಮಾಡುತ್ತಿದ್ದರಂತೆ. ಪ್ರಕರಣದ ಆರೋಪಿಗಳು ತಲೆಮರೆಸಿಕೊಂಡಿದ್ದು, 8 ಜನರ ವಿರುದ್ಧ ಕೇಸು ದಾಖಲಿಸಿ ತನಿಖೆ ನಡೆಸುತ್ತಿರುವುದಾಗಿ ಪೊಲೀಸ್ ವರಿಷ್ಠಾಧಿಕಾರಿ ತಿಳಿಸಿದ್ದಾರೆ.

ETV Bharat Logo

Copyright © 2024 Ushodaya Enterprises Pvt. Ltd., All Rights Reserved.