ಚೆನ್ನೈ: ಮಹಾಮಾರಿ ಕೊರೊನಾ ಸೋಂಕಿಗೊಳಗಾಗಿ ಚೆನ್ನೈನ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆದುಕೊಳ್ಳುತ್ತಿದ್ದ ನಟ ಕಮ್ ರಾಜಕೀಯ ಮುಖಂಡ ವಿಜಯ್ ಕಾಂತ್ ಹಾಗೂ ಅವರ ಪತ್ನಿ ಪ್ರೇಮಲತಾ ಡಿಸ್ಚಾರ್ಜ್ ಆಗಲಿದ್ದಾರೆ.
ಚೆನ್ನೈನ ಎಂಐಒಟಿ ಅಂತಾರಾಷ್ಟ್ರೀಯ ಆಸ್ಪತ್ರೆಯಲ್ಲಿ ಡಿಎಂಡಿಕೆ ಮುಖಂಡ ವಿಜಯ್ಕಾಂತ್ ಹಾಗೂ ಅವರ ಪತ್ನಿ ಪ್ರೇಮಲತಾ ಕೊರೊನಾ ವೈರಸ್ ಸೋಂಕಿಗೆ ಚಿಕಿತ್ಸೆ ಪಡೆದುಕೊಳ್ಳುತ್ತಿದ್ದರು. ಸಂಪೂರ್ಣವಾಗಿ ಗುಣಮುಖರಾಗಿರುವ ಕಾರಣ ಇಂದು ಬಿಡುಗಡೆಯಾಗಲಿದ್ದಾರೆ.
ಇದಕ್ಕೆ ಸಂಬಂಧಿಸಿದಂತೆ ಆಸ್ಪತ್ರೆ ಆಡಳಿತ ಮಂಡಳಿ ಪ್ರಕಟಣೆ ಹೊರಡಿಸಿದ್ದು, ಕೋವಿಡ್ ಕಾರಣದಿಂದಾಗಿ ಸೆಪ್ಟೆಂಬರ್ 24ರಂದು ಆಸ್ಪತ್ರೆಗೆ ದಾಖಲಾಗಿದ್ದರು ಎಂದು ತಿಳಿಸಿದೆ.