ನವದೆಹಲಿ: ಪ್ರಧಾನಿ ನರೇಂದ್ರ ಮೋದಿ ಮತ್ತು ಬಾಂಗ್ಲಾದೇಶದ ಪ್ರಧಾನಿ ಹೆಚ್.ಇ.ಶೇಖ್ ಹಸೀನಾ ನಡುವೆ ಡಿಸೆಂಬರ್ 17ರಂದು ದ್ವಿಪಕ್ಷೀಯ ಮಾತುಕತೆ ನಡೆಯಲಿದೆ.
ಪ್ರಧಾನಿ ಮೋದಿ, ಬಾಂಗ್ಲಾ ಪ್ರಧಾನಿ ದ್ವಿಪಕ್ಷೀಯ ಮಾತುಕತೆ
ಶೃಂಗಸಭೆಯ ಸಮಯದಲ್ಲಿ ಕೋವಿಡ್ ನಂತರದ ಸಮಯದಲ್ಲೂ ಪರಸ್ಪರ ಎರಡು ದೇಶಗಳ ನಡುವಿನ ಸಹಕಾರಕ್ಕೆ ಒತ್ತು ನೀಡುವುದು ಸೇರಿದಂತೆ, ಉಭಯ ದೇಶಗಳ ದ್ವಿಪಕ್ಷೀಯ ಸಂಬಂಧಗಳ ಬಗ್ಗೆ ಚರ್ಚಿಸಲಿದ್ದಾರೆ.
ಓದಿ: ಡಿಸೆಂಬರ್ನಲ್ಲಿ ಪ್ರಧಾನಿ ಮೋದಿ, ಬಾಂಗ್ಲಾ ಪ್ರಧಾನಿ ಚರ್ಚೆ
ಭಾರತ ಮತ್ತು ಬಾಂಗ್ಲಾದೇಶ ಪರಸ್ಪರ ತಮ್ಮ ಮಾತುಕತೆಯನ್ನು ಉನ್ನತ ಮಟ್ಟದಲ್ಲಿ ಮುಂದುವರಿಸಿವೆ. ಪ್ರಧಾನಿ ಶೇಖ್ ಹಸೀನಾ ಅವರು 2019 ರ ಅಕ್ಟೋಬರ್‌ನಲ್ಲಿ ಭಾರತಕ್ಕೆ ಅಧಿಕೃತ ಭೇಟಿ ನೀಡಿದ್ದರು. ಮಾರ್ಚ್ 2020 ರಲ್ಲಿ ನಡೆದ ಮುಜೀಬ್ ಬೋರ್ಶೊ ಅವರ ಐತಿಹಾಸಿಕ ಸಂದರ್ಭದಲ್ಲಿ ಪ್ರಧಾನಿ ನರೇಂದ್ರ ಮೋದಿ ಅವರು ವಿಡಿಯೋ ಸಂದೇಶವನ್ನು ನೀಡಿದ್ದರು. ಕೋವಿಡ್ ಸಾಂಕ್ರಾಮಿಕ ಸಮಯದಲ್ಲಿ ಉಭಯ ನಾಯಕರು ನಿರಂತರವಾಗಿ ಸಂಪರ್ಕದಲ್ಲಿದ್ದಾರೆ.