ವಾರಣಾಸಿ: ಶ್ರೀಲಂಕಾದ ಪ್ರಧಾನಿ ಮಹಿಂದಾ ರಾಜಪಕ್ಸೆ ಇಂದು ಸಾರನಾಥ ಬೌದ್ಧ ದೇವಾಲಯ, ಕಾಶಿ ವಿಶ್ವನಾಥ ದೇವಸ್ಥಾನ ಮತ್ತು ವಾರಣಾಸಿಯ ಇತರ ದೇವಾಲಯಗಳಲ್ಲಿ ಪ್ರಾರ್ಥನೆ ಸಲ್ಲಿಸಿದ್ದಾರೆ.
ದ್ವಿಪಕ್ಷೀಯ ಬಾಂಧವ್ಯವನ್ನು ಇನ್ನಷ್ಟು ಹೆಚ್ಚಿಸುವ ಮಾರ್ಗಗಳನ್ನು ಅನ್ವೇಷಿಸಲು ಭಾರತದ ಪ್ರಧಾನಿ ನರೇಂದ್ರ ಮೋದಿ ಅವರೊಂದಿಗೆ ಮಾತುಕತೆ ನಡೆಸಿದ ನಂತರ ಉತ್ತರ ಪ್ರದೇಶದ ವಾರಣಾಸಿಗೆ ಅವರು ಭೇಟಿ ನೀಡಿದರು. ವಾರಣಾಸಿ ಮತ್ತು ಸಾರನಾಥ ದೇವಾಲಯಕ್ಕೆ ಭೇಟಿ ನೀಡಿದ ನಂತರ, ಬಿಹಾರದ ಬೋದ್ ಗಯಾ ಮತ್ತು ಆಂಧ್ರಪ್ರದೇಶದ ತಿರುಪತಿಗೆ ಪ್ರಯಾಣಿಸಲಿದ್ದಾರೆ.
ಕಳೆದ ನಾಲ್ಕು ವರ್ಷಗಳಿಂದ ಉಭಯ ದೇಶಗಳ ನಡುವಿನ ಸಂಬಂಧದಲ್ಲಿ ಉತ್ತಮ ಬೆಳವಣಿಗೆ ಕಂಡಿದ್ದು, ಅಧ್ಯಕ್ಷ ಗೋತಬಯಾ ರಾಜಪಕ್ಸೆ ಉನ್ನತಾಧಿಕಾರ ವಹಿಸಿಕೊಂಡ ನಂತರ ನವೆಂಬರ್‌ನಲ್ಲಿ ಭಾರತಕ್ಕೆ ಭೇಟಿ ನೀಡಿದ್ದರು. ಅಲ್ಲದೆ ಈ ಹಿಂದೆ ಭಾರತದ ವಿದೇಶಾಂಗ ಸಚಿವ ಜೈಶಂಕರ್ ಸಹ ಶ್ರೀಲಂಕಾ ಪ್ರಧಾನಿಯನ್ನು ಭೇಟಿ ಮಾಡಿ ಮಾತುಕತೆ ನಡೆಸಿದ್ದರು.