ಭೋಪಾಲ್(ಮಧ್ಯ ಪ್ರದೇಶ): 53 ವರ್ಷದ ಅಂಧ ಮಹಿಳೆ ಮೇಲೆ ಕಾಮುಕನೋರ್ವ ಮನೆಗೆ ನುಗ್ಗಿ ಅಟ್ಟಹಾಸ ಮೆರೆದಿರುವ ಘಟನೆ ಭೋಪಾಲ್ನ ಶಾಪುರ ಪ್ರದೇಶದಲ್ಲಿ ಶುಕ್ರವಾರ ನಡೆದಿದೆ.
ಸಂತ್ರಸ್ತೆ ಬ್ಯಾಂಕ್ ಉದ್ಯೋಗಿಯಾಗಿದ್ದು, ಆಕೆಯ ಪತಿ ಮತ್ತು ಕುಟುಂಬಸ್ಥರು ಕೋವಿಡ್- 19 ಲಾಕ್ಡೌನ್ನಿಂದಾಗಿ ರಾಜಸ್ಥಾನದಲ್ಲಿ ಸಿಲುಕಿಕೊಂಡಿದ್ದಾರೆ. ಮನೆಯಲ್ಲಿ ಮಹಿಳೆ ಮಲಗಿರುವ ವೇಳೆ ಆಕೆಯ ರೂಂಗೆ ನುಗ್ಗಿದ್ದ ಅಪರಿಚಿತ ವ್ಯಕ್ತಿಯೊಬ್ಬ ಅತ್ಯಾಚಾರವೆಸಗಿದ್ದಾನೆ. ತನ್ನ ಮೇಲೆ ನಡೆದಿರುವ ಈ ದುಷ್ಕೃತ್ಯದ ವಿರುದ್ಧ ಸಂತ್ರಸ್ತೆ ಪೊಲೀಸರಿಗೆ ದೂರು ನೀಡಿದ್ದಾಳೆ.
ಈ ಕುರಿತು ಪ್ರತಿಕ್ರಿಯೆ ನೀಡಿರುವ ಎಎಸ್ಪಿ ಸಂಜಯ್ ಸಾಹು, ಘಟನಾ ಸ್ಥಳಕ್ಕೆ ಭೇಟಿ ನೀಡಿ, ಪರಿಶೀಲನೆ ನಡೆಸಿದ್ದೇವೆ. ಆರೋಪಿಯ ಕುರಿತು ಯಾವ ಸುಳಿವು ಸಿಕಿಲ್ಲ. ಪೊಲೀಸರು ತನಿಖೆ ಮುಂದುವರೆಸಿದ್ದಾರೆ. ಸಂತ್ರಸ್ತೆಯನ್ನು ವೈದ್ಯಕೀಯ ತಪಾಸಣೆಗೆ ಕಳುಹಿಸಲಾಗಿದೆ. ಘಟನೆ ಸಂಬಂಧ ಶಾಪುರ ಪೊಲೀಸ್ ಠಾಣೆಯಲ್ಲಿ ಐಪಿಸಿ ಸೆಕ್ಷನ್ 356 ಮತ್ತು 377ರ ಅಡಿಯಲ್ಲಿ ಪ್ರಕರಣ ದಾಖಲಾಗಿರುವುದಾಗಿ ಮಾಹಿತಿ ನೀಡಿದ್ದಾರೆ.