ETV Bharat / bharat

ಹಿಮಾಚಲ ಪ್ರದೇಶ: 50 ನಗರ ಸ್ಥಳೀಯ ಸಂಸ್ಥೆಗಳ ಚುನಾವಣೆಗೆ ಮತದಾನ ಆರಂಭ - ಹಿಮಾಚಲ ಪ್ರದೇಶ ಚುನಾವಣೆ

29 ಪುರಸಭೆಗಳು ಮತ್ತು 21 ನಗರ ಪಂಚಾಯತ್​​ಗೆ ಚುನಾವಣೆ ನಡೆಯುತ್ತಿದೆ. ಸಂಜೆ 5 ಗಂಟೆಯವರೆಗೆ ಮತದಾನ ನಡೆಯಲಿದ್ದು, 4 ಗಂಟೆಯ ನಂತರ ಕೋವಿಡ್​​ ಸೋಂಕಿತರಿಗೆ ಮತದಾನ ಮಾಡಲು ಅವಕಾಶ ಕಲ್ಪಿಸಲಾಗಿದೆ.

polling for urban body elections in himachal
ಹಿಮಾಚಲ ಪ್ರದೇಶ: 50 ನಗರ ಸ್ಥಳೀಯ ಸಂಸ್ಥೆಗಳಿಗೆ ಇಂದು ಮತದಾನ
author img

By

Published : Jan 10, 2021, 11:46 AM IST

ಶಿಮ್ಲಾ: ಹಿಮಾಚಲ ಪ್ರದೇಶದ 50 ನಗರ ಸ್ಥಳೀಯ ಸಂಸ್ಥೆಗಳಿಗೆ ಇಂದು ಮತದಾನ ನಡೆಯುತ್ತಿದೆ.

29 ಪುರಸಭೆಗಳು ಮತ್ತು 21 ನಗರ ಪಂಚಾಯಿತಿಗಳಿಗೆ ಚುನಾವಣೆ ನಡೆಯುತ್ತಿದ್ದು, ಸಂಜೆ 5 ಗಂಟೆಯವರೆಗೆ ಮತದಾನ ನಡೆಯಲಿದೆ. 4 ಗಂಟೆಯ ನಂತರ ಕೋವಿಡ್​​ ಸೋಂಕಿತರಿಗೆ ಮತದಾನ ಮಾಡಲು ಅವಕಾಶ ಕಲ್ಪಿಸಲಾಗಿದೆ.

ಚುನಾವಣೆಯಲ್ಲಿ 1,196 ಅಭ್ಯರ್ಥಿಗಳು ಕಣದಲ್ಲಿದ್ದು, 416 ವಾರ್ಡ್ ಪ್ರತಿನಿಧಿಗಳನ್ನು ಆಯ್ಕೆ ಮಾಡಲಾಗುತ್ತದೆ. ನರ್ಕಂಡದಲ್ಲಿ 4 ಅಭ್ಯರ್ಥಿಗಳು ಮತ್ತು ಗಾಗ್ರೆಟ್‌ನಲ್ಲಿ ಒಬ್ಬ ಅಭ್ಯರ್ಥಿ ಅವಿರೋಧವಾಗಿ ಆಯ್ಕೆಯಾಗಿದ್ದಾರೆ. ಉಳಿದಂತೆ 411 ಸ್ಥಾನಗಳಿಗೆ ಚುನಾವಣೆ ನಡೆಯುತ್ತಿದೆ.

ಈ ಸುದ್ದಿಯನ್ನೂ ಓದಿ: ರೈಲಿನಡಿ ಸಿಲುಕುತ್ತಿದ್ದ ಮಹಿಳೆಯ ಜೀವ ಉಳಿಸಿದ ಆರ್‌ಪಿಎಫ್ ಸಿಬ್ಬಂದಿ

ಒಟ್ಟು 2 ಲಕ್ಷ 87 ಸಾವಿರ ಮತದಾರರು ಮತ ಚಲಾಯಿಸಲಿದ್ದಾರೆ. ಈ ಪೈಕಿ 1 ಲಕ್ಷದ 44 ಸಾವಿರದ 636 ಪುರುಷರು ಮತ್ತು 1 ಲಕ್ಷದ 42 ಸಾವಿರದ 949 ಮಹಿಳೆಯರು ಮತ ಚಲಾಯಿಸಲಿದ್ದಾರೆ. ಕಾಂಗ್ರಾ ಜಿಲ್ಲೆಯಲ್ಲಿ ಅತಿ ಹೆಚ್ಚು ಮತದಾರರು ಅಂದರೆ 51 ಸಾವಿರ 326 ಮತದಾರರು ಮತ ಚಲಾಯಿಸಲಿದ್ದಾರೆ.

416 ವಾರ್ಡ್‌ಗಳಲ್ಲಿ 456 ಮತಗಟ್ಟೆಗಳನ್ನು ಸ್ಥಾಪಿಸಲಾಗಿದೆ. ಸಂಜೆ 5 ಗಂಟೆಗೆ ಮತದಾನ ಮುಗಿಯಲಿದ್ದು, ನಂತರ ಫಲಿತಾಂಶ ಪ್ರಕಟಿಸಲಾಗುವುದು.

ETV Bharat Logo

Copyright © 2024 Ushodaya Enterprises Pvt. Ltd., All Rights Reserved.