ಕೋಟಾ (ರಾಜಸ್ಥಾನ): ಮೊಬೈಲ್ ಕಳ್ಳತನ ಮಾಡಿದ್ದಾನೆ ಎಂದು ಆರೋಪಿಸಿ ಬಾಲಕನ ಮೇಲೆ 5 ಮಂದಿ ದುಷ್ಕರ್ಮಿಗಳು ದಾಳಿ ನಡೆಸಿದ ಘಟನೆ ರಾಜಸ್ಥಾನ ರಾಜ್ಯದ ಬಾಲಕುಂಡ್ನ ದಾದಾಬರಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ.
ಈ ಘಟನೆ ಜೂನ್ 27ರಂದು ನಡೆದಿದ್ದು, ಬಾಲಕನಿಗೆ ಬೆಲ್ಟ್ನಿಂದ ಹೊಡೆಯುತ್ತಿರುವ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ.
ಸದ್ಯ ಪೊಲೀಸರು ಆರೋಪಿಗಳ ವಿರುದ್ಧ ಎಫ್ಐಆರ್ ದಾಖಲಿಸಿ ತನಿಖೆ ಆರಂಭಿಸಿದ್ದಾರೆ.