ಪಾಟ್ನಾ(ಉತ್ತರಪ್ರದೇಶ): 2022ರ ಉತ್ತರಪ್ರದೇಶ ವಿಧಾನಸಭಾ ಚುನಾವಣೆಯಲ್ಲಿ 351 ಸೀಟ್ಗಳಲ್ಲಿ ನಾವು ಗೆಲುವು ದಾಖಲು ಮಾಡುತ್ತೇವೆ ಎಂದು ಸಮಾಜವಾದಿ ಪಕ್ಷದ ಮುಖಂಡ, ಮಾಜಿ ಮುಖ್ಯಮಂತ್ರಿ ಅಖಿಲೇಶ್ ಯಾದವ್ ವಿಶ್ವಾಸ ವ್ಯಕ್ತಪಡಿಸಿದ್ದಾರೆ.
ಸುದ್ದಿಗಾರರೊಂದಿಗೆ ಮಾತನಾಡಿದ ಅಖಿಲೇಶ್ ಯಾದವ್, ಸದ್ಯ ಸೈಕಲ್ ತುಂಬಾ ವೇಗ ಪಡೆದುಕೊಂಡಿದ್ದು, 351 ಕ್ಷೇತ್ರಗಳಲ್ಲಿ ಗೆಲುವು ದಾಖಲು ಮಾಡುವ ಮೂಲಕ ಸರ್ಕಾರ ರಚನೆ ಮಾಡುತ್ತೇವೆ ಎಂದಿದ್ದಾರೆ. ಇದೇ ವೇಳೆ, ಬೇರೆ ಯಾವುದೇ ಪಕ್ಷದೊಂದಿಗೆ ತಾವು ಹೊಂದಾಣಿಕೆ ಮಾಡಿಕೊಳ್ಳುವುದಿಲ್ಲ ಎಂದು ಸ್ಪಷ್ಟ ಪಡಿಸಿದ್ದಾರೆ.
2017 ವಿಧಾನಸಭೆ ಚುನಾವಣೆಯಲ್ಲಿ ಕಾಂಗ್ರೆಸ್ ಜತೆ ಮೈತ್ರಿ ಮಾಡಿಕೊಂಡಿದ್ದ ಸಮಾಜವಾದಿ ಪಕ್ಷ ಸೋಲು ಕಾಣುವ ಮೂಲಕ ಮುಖಭಂಗಕ್ಕೊಳಗಾಗಿತ್ತು. ಬಿಜೆಪಿ 325 ಕ್ಷೇತ್ರಗಳಲ್ಲಿ ಗೆಲುವು ದಾಖಲು ಮಾಡಿದ್ರೆ, ಕಾಂಗ್ರೆಸ್+ಎಸ್ಪಿ ಮೈತ್ರಿ 54 ಕ್ಷೇತ್ರಗಳಲ್ಲಿ ಗೆಲುವು ಸಾಧಿಸಿತ್ತು. ಉಳಿದಂತೆ ಬಿಎಸ್ಪಿ 19 ಕ್ಷೇತ್ರಗಳಲ್ಲಿ ಗೆಲುವು ಸಾಧಿಸಿದೆ.