ಮುಂಬೈ: ಕೊರೊನಾ ಸೋಂಕಿನ ಹಾಟ್ಸ್ಪಾಟ್ ಆಗಿರುವ ಮುಂಬೈ, ಪುಣೆ, ನಾಸಿಕ್ ಮತ್ತು ನಾಗ್ಪುರದಂತಹ ನಗರಗಳಲ್ಲಿ ಮಾಸ್ಕ್ಗಳನ್ನು ಧರಿಸುವುದು ಕಡ್ಡಾಯವಾಗಿದೆ ಎಂದು ಮಹಾರಾಷ್ಟ್ರ ಹೋಂ ಮಿನಿಸ್ಟರ್ ಅನಿಲ್ ದೇಶ್ಮುಖ್ ತಿಳಿಸಿದ್ದಾರೆ.
ಹಾಗೆಯೇ ಕೋವಿಡ್-19 ಪ್ರಕರಣಗಳು ಹೆಚ್ಚಾಗಿರುವ ಈ ನಗರಗಳ ಜನ ಮಾಸ್ಕ್ ಇಲ್ಲದೇ ಹೊರಗೆ ಕಾಲಿಡಬೇಡಿ ಎಂದು ಮಹಾರಾಷ್ಟ್ರದ ಗೃಹಸಚಿವರು ಟ್ವಿಟರ್ನಲ್ಲಿ ವಿಡಿಯೋ ಮೂಲಕ ಮನವಿ ಮಾಡಿದ್ದಾರೆ. ಮಹಾರಾಷ್ಟ್ರದ ಪ್ರಮುಖ ನಗರಗಳಲ್ಲಿ ಕೊರೊನಾ ಸೋಂಕು ವ್ಯಾಪಕವಾಗಿ ಹರಡುತ್ತಿರುವ ಹಿನ್ನೆಲೆ ಮಾಸ್ಕ್ ಕಡ್ಡಾಯಗೊಳಿಸಿದ್ದಾರೆ.
ಭಾರತದಲ್ಲಿ ಅತೀ ಹೆಚ್ಚು ಕೋವಿಡ್ ಪ್ರಕರಣಗಳು ದಾಖಲಾಗಿರುವ ರಾಜ್ಯಗಳ ಪಟ್ಟಿಯಲ್ಲಿ ಮಹಾರಾಷ್ಟ್ರ ಮೊದಲ ಸ್ಥಾನದಲ್ಲಿದೆ. ಈವರೆಗೂ ಒಟ್ಟು 1297 ಕೊರೊನಾ ಪಾಸಿಟಿವ್ ಪ್ರಕರಣಗಳು ಪತ್ತೆಯಾಗಿವೆ. 72 ಜನ ಕೊರೊನಾ ಕೋವಿಡ್ -19 ವೈರಸ್ಗೆ ಬಲಿಯಾಗಿದ್ದಾರೆ.