ಕೋಲ್ಕತ್ತಾ: ಪಶ್ಚಿಮ ಬಂಗಾಳ ಬಿಜೆಪಿ ರಾಜ್ಯಾಧ್ಯಕ್ಷ ದಿಲೀಪ್ ಘೋಷ್ ಅವರಿಗೆ ಕೊರೊನಾ ಸೋಂಕು ತಗುಲಿದ್ದು, ಅವರನ್ನು ಖಾಸಗಿ ಆಸ್ಪತ್ರೆಯಲ್ಲಿ ದಾಖಲಿಸಿರುವುದಾಗಿ ಆರೋಗ್ಯ ಇಲಾಖೆ ಮೂಲಗಳು ತಿಳಿಸಿವೆ.
"ಘೋಷ್ ಅವರಿಗೆ 102 ಡಿಗ್ರಿ ಜ್ವರವಿದ್ದು, ಚಿಕಿತ್ಸೆ ನೀಡಲಾಗುತ್ತಿದೆ. ಅವರ ಆಮ್ಲಜನಕದ ಮಟ್ಟ ಸರಿಯಾಗಿದೆ. ಘೋಷ್ರ ಆರೋಗ್ಯ ಸ್ಥಿತಿ ಬಗ್ಗೆ ಚಿಂತೆ ಬೇಡ" ಎಂದು ಆಸ್ಪತ್ರೆಯ ಹಿರಿಯ ವೈದ್ಯರೊಬ್ಬರು ಮಾಹಿತಿ ನೀಡಿದ್ದಾರೆ.
ಇನ್ನು ಕೋವಿಡ್ಗೆ ಒಳಗಾಗಿರುವ ಮೇದಿನಿಪುರ ಸಂಸದರ ಆರೋಗ್ಯ ಸ್ಥಿತಿ ಕಳೆದ ಕೆಲದಿನಗಳಿಂದ ಹದಗೆಟ್ಟಿದೆ ಎಂದು ಉನ್ನತ ಮೂಲಗಳು ತಿಳಿಸಿವೆ.