ETV Bharat / bharat

ಅಯೋಧ್ಯೆ ವಿವಾದದ ಬಗ್ಗೆ 2010ರಲ್ಲಿ ಅಲಹಾಬಾದ್ ಕೋರ್ಟ್ ತೀರ್ಪು ಏನಾಗಿತ್ತು? - ಅಲಹಾಬಾದ್ ಕೋರ್ಟ್ ತೀರ್ಪು

ವಿವಾದಿತ ರಾಮಜನ್ಮಭೂಮಿ-ಬಾಬ್ರಿ ಮಸೀದಿ ವಿವಾದಕ್ಕೆ ಸಂಬಂಧಿಸಿದಂತೆ ಸುಪ್ರೀಂಕೋರ್ಟ್ ಐತಿಹಾಸಿಕ ತೀರ್ಪು ನೀಡಿದ್ದು ಏಳು ದಶಕಗಳಿಂದ ನಡೆಯುತ್ತಿದ್ದ ಪ್ರಕರಣ ಸುಖಾಂತ್ಯ ಕಂಡಿದೆ. ಆದ್ರೆ 9 ವರ್ಷಗಳ ಹಿಂದೆ ಇದೇ ಪ್ರಕರಣದ ಬಗ್ಗೆ ಅಲಹಾಬಾದ್ ಹೈಕೋರ್ಟ್ ಮಹತ್ವದ ತೀರ್ಪು ನೀಡಿತ್ತು.

ಅಲಹಾಬಾದ್ ಕೋರ್ಟ್ ತೀರ್ಪು
author img

By

Published : Nov 9, 2019, 4:39 PM IST

ಹೈದರಾಬಾದ್​​: ರಾಮಜನ್ಮಭೂಮಿ-ಬಾಬ್ರಿ ಮಸೀದಿಯ ವಿವಾದಿತ 2.77 ಎಕರೆ ಜಾಗದ ಬಗೆಗಿನ ತೀರ್ಪು ಇಂದು ಹೊರಬಿದ್ದಿದ್ದು, ಏಳು ದಶಕಗಳ ಸಂಘರ್ಷಕ್ಕೆ ಅಧಿಕೃತ ತೆರೆ ಬಿದ್ದಿದೆ. ಇದೇ ಪ್ರಕರಣಕ್ಕೆ ಸಂಬಂಧಿಸಿದಂತೆ 2010ರಲ್ಲಿ ಅಲಹಾಬಾದ್ ಹೈಕೋರ್ಟ್ ಕೂಡಾ ಮಹತ್ವದ ತೀರ್ಪು ನೀಡಿತ್ತು.

2002ರಲ್ಲಿ ಈ ವಿವಾದಿತ ಜಾಗದ ಒಡೆತನ ಯಾರಿಗೆ ಸೇರಿದ್ದು ಎನ್ನುವ ವ್ಯಾಜ್ಯದ ಕುರಿತು ಅಲಹಾಬಾದ್​ ಹೈಕೋರ್ಟ್​ ವಿಚಾರಣೆ ಆರಂಭಿಸಿದೆ. ಪಾಲುದಾರ ಅರ್ಜಿದಾರರಾದ ಸುನ್ನಿ ವಕ್ಫ್ ಮಂಡಳಿ, ನಿರ್ಮೋಹಿ ಅಖಾರ ಮತ್ತು ರಾಮ ಲಲ್ಲಾ ಎಂಬ ಮೂವರು ವಾರಸುದಾರರಿಗೆ ವಿವಾದಿತ ಜಾಗದ ಸಮಾನವಾಗಿ ಹಂಚಿಕೆ ಮಾಡಿ ಕೋರ್ಟ್ ತೀರ್ಪಿತ್ತಿದೆ. ಸುನ್ನಿ ವಕ್ಫ್ ಮಂಡಳಿ, ನಿರ್ಮೋಹಿ ಅಖಾರಾ ಮತ್ತು ರಾಮ್ ಲಲ್ಲಾಗೆ ಸಮಾನವಾಗಿ ಈ ಭೂಮಿಯನ್ನು ಹಂಚಿಕೆ ಮಾಡುವಂತೆ ನ್ಯಾಯಮೂರ್ತಿಗಳ ಪೀಠ 2:1 ಬಹುಮತದ ಒಪ್ಪಿಗೆ ನೀಡಿತ್ತು.

ಈ ತೀರ್ಪು ನೀಡಿದ ನ್ಯಾಯಪೀಠದಲ್ಲಿ ಅಲಹಾಬಾದ್ ಹೈಕೋರ್ಟ್ ನ್ಯಾಯಮೂರ್ತಿ ಎಸ್‌. ಯು. ಖನ್ನಾ, ನ್ಯಾಯಮೂರ್ತಿ ಸುಧೀರ್ ಅಗರ್‌ವಾಲ್ ಮತ್ತು ನ್ಯಾಯಮೂರ್ತಿ ಡಿ. ವಿ. ಶರ್ಮಾ ಇದ್ದರು.

2010ರ ಸೆಪ್ಟೆಂಬರ್‌ನಲ್ಲಿ ಮೂವರು ನ್ಯಾಯಮೂರ್ತಿಗಳಿದ್ದ ಅಲಹಾಬಾದ್ ಹೈಕೋರ್ಟ್ ನ್ಯಾಯಪೀಠ ನೀಡಿದ್ದ ತೀರ್ಪನ್ನು ಸುಪ್ರೀಂಕೋರ್ಟ್‌ನಲ್ಲಿ ಪ್ರಶ್ನಿಸಿ ಮೇಲ್ಮನವಿ ಸಲ್ಲಿಸಲಾಗಿತ್ತು. ಈ ಅರ್ಜಿಯ ವಿಚಾರಣೆ ನಡೆಸಿದ ಐವರು ನ್ಯಾಯೂರ್ತಿಗಳಿದ್ದ ಸಂವಿಧಾನಿಕ ಪೀಠ ಇಂದು ಐತಿಹಾಸಿಕ ತೀರ್ಪು ನೀಡಿ ವಿವಾದಕ್ಕೆ ತಾರ್ಕಿಕ ಅಂತ್ಯ ಕೊಟ್ಟಿದೆ.

Intro:Body:

ಅಯೋಧ್ಯೆ ರಾಮಮಂದಿರ ವಿವಾದ: ಅಲಹಾಬಾದ್ ಕೋರ್ಟ್ ತೀರ್ಪು ಏನಾಗಿತ್ತು?

ರಾಮಜನ್ಮಭೂಮಿಯ 2.77 ಎಕರೆ ಜಾಗದ ತೀರ್ಪು ಇಂದು ಹೊರಬಿದ್ದಿದ್ದು, ಏಳು ದಶಕಗಳ ಕಾಲದಿಂದ ನಡೆಯುತ್ತಿದ್ದ ವಿವಾದಕ್ಕೆ ತೆರೆ ಬಿದ್ದಿದೆ. ಆದರೆ 2010ರಲ್ಲಿ ಅಲಹಾಬಾದ್ ಹೈಕೋರ್ಟ್ ಇದಕ್ಕೆ ಸಂಬಂಧಿಸಿದಂತೆ ತೀರ್ಪು ನೀಡಿತ್ತು.

2002ರಲ್ಲಿ ಈ ವಿವಾದಿತ ಜಾಗದ ಒಡೆತನ ಯಾರಿಗೆ ಸೇರಿದ್ದು ಎನ್ನುವ ವ್ಯಾಜ್ಯದ ಕುರಿತು ಅಲಹಬಾದ್​ ಹೈಕೋರ್ಟ್​​ನಲ್ಲಿ ವಿಚಾರಣೆ ಆರಂಭಗೊಂಡಿತ್ತು. 2010 ಸುನ್ನಿ ವಕ್ಫ್ ಮಂಡಳಿ, ನಿರ್ಮೋಹಿ ಅಖಾರ ಮತ್ತು ರಾಮ್ ಲಲ್ಲಾ ಮೂರು ವಾರಸುದಾರರಿಗೆ ವಿವಾದಿತ ಜಾಗದ ಸಮಾನ ಹಂಚಿಕೆ ಮಾಡಿ ತೀರ್ಪು ಹೊರಹಾಕಲಾಗಿತ್ತು. ಇನ್ನು ಅಲಹಾಬಾದ್ ನ್ಯಾಯಾಲಯ 2.77 ಎಕರೆಗಳ ರಾಮ ಜನ್ಮಭೂಮಿ-ಬಾಬ್ರಿ ಮಸೀದಿ ಜಾಗವನ್ನು ಮೂರು ಭಾಗಗಳಾಗಿ ವಿಭಾಗಿಸಬೇಕು ಎಂಬ ಆದೇಶ ನೀಡಿತ್ತು. ಸುನ್ನಿ ವಕ್ಫ್ ಮಂಡಳಿ, ನಿರ್ಮೋಹಿ ಅಖಾರಾ ಮತ್ತು ರಾಮ್ ಲಲ್ಲಾಗೆ ಸಮಾನವಾಗಿ ಈ ಭೂಮಿಯನ್ನು ಹಂಚಿಕೆ ಮಾಡುವಂತೆ 2:1 ಬಹುಮತದ ಆದೇಶವನ್ನು ನೀಡಿತ್ತು.

2010ರ ಸೆಪ್ಟೆಂಬರ್‌ನಲ್ಲಿ ಮೂವರು ನ್ಯಾಯಮೂರ್ತಿಗಳ ಅಲಹಾಬಾದ್ ಹೈಕೋರ್ಟ್ ನೀಡಿದ್ದ ತೀರ್ಪನ್ನು ಸುಪ್ರೀಂಕೋರ್ಟ್‌ನಲ್ಲಿ ಪ್ರಶ್ನಿಸಿದ್ದರು. ಈ ಅರ್ಜಿಯ ವಿಚಾರಣೆ ನಡೆಸಿದ ಐವರು ನ್ಯಾಯೂರ್ತಿಗಳ ಸಂವಿಧಾನಿಕ ಪೀಠ ಇಂದು ತೀರ್ಪು ನಿಡಿದೆ.

ಅಲಹಾಬಾದ್ ಹೈಕೋರ್ಟ್ ನ್ಯಾಯಮೂರ್ತಿ ಎಸ್‌. ಯು. ಖನ್ನಾ, ನ್ಯಾಯಮೂರ್ತಿ ಸುಧೀರ್ ಅಗರ್‌ವಾಲ್ ಮತ್ತು ನ್ಯಾಯಮೂರ್ತಿ ಡಿ. ವಿ. ಶರ್ಮಾ 2:1ರ ಅನುಪಾತದಲ್ಲಿ 2.77 ಎಕರೆ ಜಾಗವನ್ನು ಹಂಚಿಕೆ ಮಾಡಿತ್ತು.

Conclusion:
ETV Bharat Logo

Copyright © 2025 Ushodaya Enterprises Pvt. Ltd., All Rights Reserved.