ನವದೆಹಲಿ : ಭಾರತದಲ್ಲಿ ಕಳೆದ 24 ಗಂಟೆಗಳಲ್ಲಿ 30,254 ಸೋಂಕಿತರು ಪತ್ತೆಯಾಗಿದ್ದು, 391 ಮಂದಿ ಸೋಂಕಿಗೆ ಬಲಿಯಾಗಿದ್ದಾರೆ. ಈ ಮೂಲಕ ದೇಶದಲ್ಲಿ ಸೋಂಕಿತರ ಸಂಖ್ಯೆ 98,57,029 ಹಾಗೂ ಮೃತರ ಸಂಖ್ಯೆ 1,43,019ಕ್ಕೆ ಏರಿಕೆಯಾಗಿದೆ.
ಇದನ್ನೂ ಓದಿ:ಕೊರೊನಾಗೆ ಜಗತ್ತು ತಲ್ಲಣ: ಒಂದು ವರ್ಷದಲ್ಲಿ 7 ಕೋಟಿ ಜನರಿಗೆ ಅಂಟಿದ ವೈರಸ್
ಒಟ್ಟು ಸೋಂಕಿತರ ಪೈಕಿ 93,57,464 ಮಂದಿ ಗುಣಮುಖರಾಗಿ, ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗಿದ್ದಾರೆ. ಉಳಿದಂತೆ 3,56,546 ಕೇಸ್ಗಳು ಸಕ್ರಿಯವಾಗಿವೆ ಎಂದು ಕೇಂದ್ರ ಆರೋಗ್ಯ ಹಾಗೂ ಕುಟುಂಬ ಕಲ್ಯಾಣ ಇಲಾಖೆ ಮಾಹಿತಿ ನೀಡಿದೆ.
ಡಿಸೆಂಬರ್ 12ರವರೆಗೆ 15,37,11,833 ಜನರಿಗೆ ಕೋವಿಡ್ ಟೆಸ್ಟ್ ಮಾಡಲಾಗಿದೆ. ನಿನ್ನೆ ಒಂದೇ ದಿನ 10,14,434 ಸ್ಯಾಂಪಲ್ಗಳನ್ನು ಪರೀಕ್ಷೆಗೆ ಒಳಪಡಿಸಲಾಗಿದೆ ಎಂದು ಭಾರತೀಯ ವೈದ್ಯಕೀಯ ಸಂಶೋಧನಾ ಮಂಡಳಿ (ICMR) ತಿಳಿಸಿದೆ.