ನವದೆಹಲಿ : ದೇಶದಲ್ಲಿ ಕೋವಿಡ್ ಸಕ್ರಿಯ ಪ್ರಕರಣಗಳ ಸಂಖ್ಯೆ 140 ದಿನಗಳ ಬಳಿಕ 4 ಲಕ್ಷ ಗಡಿಯಿಂದ (3,96,729) ಕೆಳಗಿಳಿದಿದೆ. ದಿನದಿಂದ ದಿನಕ್ಕೆ ಮರಣ ಸಂಖ್ಯೆ ಕೂಡ ಕಡಿಮೆಯಾಗುತ್ತಿದ್ದು, ಕೊರೊನಾ ವಿರುದ್ಧದ ಭಾರತದ ಹೋರಾಟ ಸಫಲವಾಗುತ್ತಿದೆ.
ಕೋವಿಡ್ ಸಂಬಂಧಿತ ಸಹಾಯ, ಸಲಹೆ, ಪ್ರಶ್ನೆಗಳಿಗಾಗಿ ಉಚಿತ ಕರೆ ಮಾಡಲು 24x7 ಸಹಾಯವಾಣಿ ಸಂಖ್ಯೆಯನ್ನು ಎಲ್ಲ ರಾಜ್ಯಗಳಿಗೆ ಆರೋಗ್ಯ ಇಲಾಖೆ ನೀಡಿದೆ.
ಕಳೆದ 24 ಗಂಟೆಗಳಲ್ಲಿ 32,981 ಸೋಂಕಿತರು ಪತ್ತೆಯಾಗಿದ್ದು, 391 ಮಂದಿ ಸೋಂಕಿಗೆ ಬಲಿಯಾಗಿದ್ದಾರೆ. ಈ ಮೂಲಕ ದೇಶದಲ್ಲಿ ಸೋಂಕಿತರ ಸಂಖ್ಯೆ 96,77,203 ಹಾಗೂ ಮೃತರ ಸಂಖ್ಯೆ 1,40,573ಕ್ಕೆ ಏರಿಕೆಯಾಗಿದೆ.
ಒಟ್ಟು ಸೋಂಕಿತರ ಪೈಕಿ ಶೇ.91.68 ರಷ್ಟು ಅಂದರೆ 75,44,798 ಮಂದಿ ಗುಣಮುಖರಾಗಿ, ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗಿದ್ದಾರೆ ಎಂದು ಕೇಂದ್ರ ಆರೋಗ್ಯ ಹಾಗೂ ಕುಟುಂಬ ಕಲ್ಯಾಣ ಇಲಾಖೆ ಮಾಹಿತಿ ನೀಡಿದೆ.
ಡಿಸೆಂಬರ್ 6ರವರೆಗೆ 14,77,87,656 ಜನರಿಗೆ ಕೋವಿಡ್ ಟೆಸ್ಟ್ ಮಾಡಲಾಗಿದ್ದು, ನಿನ್ನೆ ಒಂದೇ ದಿನ 8,01,081 ಸ್ಯಾಂಪಲ್ಗಳನ್ನು ಪರೀಕ್ಷೆಗೆ ಒಳಪಡಿಸಲಾಗಿದೆ ಎಂದು ಭಾರತೀಯ ವೈದ್ಯಕೀಯ ಸಂಶೋಧನಾ ಮಂಡಳಿ (ICMR) ತಿಳಿಸಿದೆ.