ನವದೆಹಲಿ: ಭಾರತದಲ್ಲಿ ಕೋವಿಡ್ ಚೇತರಿಕೆಯ ಪ್ರಮಾಣ ಶೇ.94ಕ್ಕೆ ಏರಿಕೆಯಾಗಿದ್ದು, ಸಕ್ರಿಯ ಕೇಸ್ಗಳ ಸಂಖ್ಯೆ 4.22 ಲಕ್ಷಕ್ಕೆ ಇಳಿಕೆಯಾಗಿದೆ.
ಕಳೆದ 24 ಗಂಟೆಗಳಲ್ಲಿ 35,551 ಸೋಂಕಿತರು ಪತ್ತೆಯಾಗಿದ್ದು, 526 ಮಂದಿ ಸೋಂಕಿಗೆ ಬಲಿಯಾಗಿದ್ದಾರೆ. ಈ ಮೂಲಕ ದೇಶದಲ್ಲಿ ಸೋಂಕಿತರ ಸಂಖ್ಯೆ 95,34,965 ಹಾಗೂ ಮೃತರ ಸಂಖ್ಯೆ 1,38,648ಕ್ಕೆ ಏರಿಕೆಯಾಗಿದೆ. ಒಟ್ಟು ಸೋಂಕಿತರ ಪೈಕಿ 89,73,373 ಮಂದಿ ಗುಣಮುಖರಾಗಿ, ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗಿದ್ದಾರೆ ಎಂದು ಕೇಂದ್ರ ಆರೋಗ್ಯ ಹಾಗೂ ಕುಟುಂಬ ಕಲ್ಯಾಣ ಇಲಾಖೆ ಮಾಹಿತಿ ನೀಡಿದೆ.
ಡಿಸೆಂಬರ್ 2ರ ವರೆಗೆ 14,35,57,647 ಜನರಿಗೆ ಕೋವಿಡ್ ಟೆಸ್ಟ್ ಮಾಡಲಾಗಿದ್ದು, ನಿನ್ನೆ ಒಂದೇ ದಿನ 11,11,698 ಸ್ಯಾಂಪಲ್ಗಳನ್ನು ಪರೀಕ್ಷೆಗೆ ಒಳಪಡಿಸಲಾಗಿದೆ ಎಂದು ಭಾರತೀಯ ವೈದ್ಯಕೀಯ ಸಂಶೋಧನಾ ಮಂಡಳಿ (ICMR) ತಿಳಿಸಿದೆ.