ಅನಂತಪುರ (ಆಂಧ್ರಪ್ರದೇಶ) : ಲಾಕ್ ಡೌನ್ ಹಿನ್ನೆಲೆ ಮದುವೆ ಮುಂದೂಡಿಕೆಯಾಗಿದ್ದಕ್ಕೆ ಮನನೊಂದ ಯುವತಿಯೊಬ್ಬಳು ಆತ್ಮಹತ್ಯೆ ಮಾಡಿಕೊಂಡ ಘಟನೆ ಜಿಲ್ಲೆಯ ಧರ್ಮವರಂ ಪೊಲೀಸ್ ಠಾಣಾ ವ್ಯಾಪ್ತಿಯ ಶಾಂತಿನಗರದಲ್ಲಿ ನಡೆದಿದೆ.
ಹಿಮಾವತಿ (25) ಆತ್ಮಹತ್ಯೆ ಮಾಡಿಕೊಂಡ ಯುವತಿ. ಮೃತ ಯುವತಿಗೆ ಕೊತ್ತಪೇಟೆಯ ಯುವಕನೊಂದಿಗೆ ನಿಶ್ಚಿತಾರ್ಥ ಆಗಿತ್ತು. ಏಪ್ರಿಲ್ನಲ್ಲಿ ಮದುವೆ ಮಾಡುವುದಾಗಿ ನಿರ್ಧರಿಸಲಾಗಿತ್ತು. ಆದರೆ, ದೇಶದಾದ್ಯಂತ ಕೊರೊನಾ ಲಾಕ್ ಡೌನ್ ಘೋಷಿಸಿರುವ ಹಿನ್ನೆಲೆ ಮದುವೆ ಸಮಾರಂಭವನ್ನು ಮುಂದೂಡಲಾಗಿದೆ. ಇದರಿಂದ ಮನನೊಂದ ಯುವತಿ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾಳೆ.
ಘಟನೆ ನಡೆದ ತಕ್ಷಣ ಕುಟುಂಬಸ್ಥರು ಯುವತಿಯನ್ನು ಆಸ್ಪತ್ರೆಗೆ ಸಾಗಿಸಿದರೂ, ಮಾರ್ಗ ಮಧ್ಯೆ ಕೊನೆಯುಸಿರೆಳೆದಿದ್ದಾಳೆ. ಮೃತ ದೇಹವನ್ನು ಮರಣೋತ್ತರ ಪರೀಕ್ಷೆಗೆ ರವಾನಿಸಲಾಗಿದೆ. ಪೊಲೀಸರು ಪ್ರಕರಣ ದಾಖಲಿಸಿಕೊಂಡು ತನಿಖೆ ಮುಂದುವರೆಸಿದ್ದಾರೆ.