ನೋಯ್ಡಾ: ಉತ್ತರಪ್ರದೇಶ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಭಾಗಿಯಾಗಿದ್ದ ಕಾರ್ಯಕ್ರಮವೊಂದರಲ್ಲಿ ಮಹಿಳಾ ಪೊಲೀಸ್ ಪೇದೆಯೊಬ್ಬರು ಎಲ್ಲರ ಮೆಚ್ಚುಗೆಗೆ ಕಾರಣವಾಗಿದ್ದಾರೆ. ಹೆಗಲ ಮೇಲೆ ಮಗು ಹೊತ್ತುಕೊಂಡು ತಮ್ಮ ಡ್ಯುಟಿ ಮಾಡಿ ಎಲ್ಲರ ಮೆಚ್ಚುಗೆಗೆ ಪಾತ್ರವಾಗಿದ್ದಾರೆ.

ಗೌತಮ್ ಬುದ್ಧ ನಗರದಲ್ಲಿ ಅಭಿವೃದ್ಧಿ ಕಾರ್ಯಕ್ರಮವೊಂದರ ಶಂಕು ಸ್ಥಾಪನೆ ಮಾಡಲು ಯೋಗಿ ಆದಿತ್ಯನಾಥ್ ಆಗಮಿಸಿದ್ದರು. ಈ ವೇಳೇ ಪ್ರೀತಿ ರಾಣಿ ಎಂಬ ಮಹಿಳಾ ಪೊಲೀಸ್ ಕಾನ್ಸ್ಟೇಬಲ್ ತನ್ನ ಒಂದೂವರೆ ವರ್ಷದ ಮಗುವನ್ನ ಹೆಗಲ ಮೇಲೆ ಹೊತ್ತುಕೊಂಡು ತನಗೆ ನೀಡಿದ್ದ ಜವಾಬ್ದಾರಿ ನಿಭಾಯಿಸಿದ್ದಾರೆ.
ಈ ಬಗ್ಗೆ ಅವರನ್ನ ಪ್ರಶ್ನೆ ಮಾಡಿದಾಗ ನನ್ನ ಗಂಡ ಪರೀಕ್ಷೆ ಬರೆಯಲು ಹೋಗಿದ್ದರಿಂದ ಮಗು ನೋಡಿಕೊಳ್ಳಲು ಯಾರು ಇರಲಿಲ್ಲ. ಹೀಗಾಗಿ ತಾವು ಮಗನೊಂದಿಗೆ ತಮಗೆ ನೀಡಿದ್ದ ಡ್ಯುಟಿ ಮಾಡಲು ಬಂದಿದ್ದಾಗಿ ಹೇಳಿಕೊಂಡಿದ್ದಾರೆ. ಪ್ರೀತಿ ರಾಣಿ ಗ್ರೇಟರ್ ನೋಯ್ಡಾದ ದಾದ್ರಿ ಪೊಲೀಸ್ ಠಾಣೆಯಲ್ಲಿ ಮಹಿಳಾ ಪೊಲೀಸ್ ಪೇದೆಯಾಗಿ ಸೇವೆ ಸಲ್ಲಿಸುತ್ತಿದ್ದಾರೆ.