ಉತ್ತರ ಪ್ರದೇಶ : ಬಿಹಾರದ ಮುಜಫರ್ಪುರದಿಂದ ದೆಹಲಿಗೆ ತೆರಳುತ್ತಿದ್ದ ಗರೀಬ್ರತ್ ಎಕ್ಸ್ಪ್ರೆಸ್ ರೈಲಿನಲ್ಲಿ ಮಹಿಳೆ ಮಗುವಿಗೆ ಜನ್ಮ ನೀಡಿದ್ದಾರೆ. ಮಹಿಳೆಯೊಬ್ಬರಿಗೆ ಇದ್ದಕ್ಕಿದ್ದಂತೆ ಹೆರಿಗೆನೋವು ಕಾಣಿಸಿಕೊಂಡಿದೆ. ಅಲ್ಲೇ ಹೆರಿಗೆಯೂ ಆಗಿದೆ. ಹೆರಿಗೆ ಬಳಿಕ ಕೂಡಲೇ ರೈಲ್ವೆ ನಿಲ್ದಾಣದಲ್ಲಿ ರೈಲು ನಿಲ್ಲಿಸಿದ ರೈಲು ಟಿಕೆಟ್ ಪರೀಕ್ಷಕ (ಟಿಟಿಇ) ಆಂಬ್ಯುಲೆನ್ಸ್‌ಗೆ ಮಾಹಿತಿ ನೀಡಿದ್ದಾರೆ. ಜಿಆರ್‌ಪಿ ಸಹಾಯದಿಂದ ತಾಯಿ ಮತ್ತು ಮಗುವನ್ನು ಆಂಬ್ಯುಲೆನ್ಸ್‌ನಿಂದ ಜಿಲ್ಲಾ ಮಹಿಳಾ ಆಸ್ಪತ್ರೆಗೆ ದಾಖಲಿಸಿ, ಚಿಕಿತ್ಸೆ ನೀಡಲಾಗುತ್ತಿದೆ.
ಮುಜಾಫರ್ ಪುರ ದಿಂದ ಪಪ್ಪು ಕುಮಾರ್ ತಮ್ಮ ಗರ್ಭಿಣಿ ಪತ್ನಿ ಸುಧಾ ಅವರೊಂದಿಗೆ ದೆಹಲಿಗೆ ತೆರಳುತ್ತಿದ್ದರು. ಈ ವೇಳೆ ಇದ್ದಕ್ಕಿದ್ದಂತೆ ಸುಧಾ ಅವರಿಗೆ ಹೆರಿಗೆ ನೋವು ಕಾಣಿಸಿಕೊಂಡಿತ್ತು. ಆಗ ತಮ್ಮ ಭೋಗಿಯಲ್ಲಿದ್ದ ಮಹಿಳೆಯರ ಸಹಾಯದಿಂದ ಸುಧಾ ಗಂಡು ಮಗುವಿಗೆ ಜನ್ಮ ನೀಡಿದ್ದರು. ಆ ಬಳಿಕ ಟಿಟಿಇ ರೈಲನ್ನು ಹಾರ್ದೋಯ್ ರೈಲ್ವೆ ನಿಲ್ದಾಣದಲ್ಲಿ ನಿಲ್ಲಿಸಿ 108 ಮತ್ತು ಜಿಆರ್‌ಪಿಗೆ ವಿಷಯ ಮುಟ್ಟಿಸಿದ್ದರು. ನಂತರ ಜಿಆರ್‌ಪಿ ಸಹಾಯದಿಂದ ತಾಯಿ ಮತ್ತು ಮಗುವನ್ನು ಆಂಬ್ಯುಲೆನ್ಸ್ ಮೂಲಕ ಜಿಲ್ಲಾ ಮಹಿಳಾ ಆಸ್ಪತ್ರೆಗೆ ದಾಖಲಿಸಿಲಾಗಿದೆ. ಸದ್ಯ ಮಗು ಹಾಗೂ ತಾಯಿ ಆರೋಗ್ಯವಾಗಿದ್ದಾರೆ ಎಂದು ಪತಿ ಪಪ್ಪು ಕುಮಾರ್ ತಿಳಿಸಿದ್ದಾರೆ.