ಚಂಡೀಗಢ: ದೇಶಾದ್ಯಂತ ಮಹಾಮಾರಿ ಕೊರೊನಾ ಅಬ್ಬರ ಜೋರಾಗಿದ್ದು, ಇದರ ಮಧ್ಯೆ ವೈಯಕ್ತಿಕ ಸುರಕ್ಷತೆಯ ಕಾರಣ ನೀಡಿರುವ ಮಹಿಳಾ ಎಐಎಸ್ ಅಧಿಕಾರಿ ತಮ್ಮ ಹುದ್ದೆಗೆ ರಾಜೀನಾಮೆ ನೀಡಿದ್ದಾರೆ.
-
मैं व मेरी बहन रीमा नागर माननीय सरकार से अनुमति लेकर चंडीगढ से अपने पैतृक शहर ग़ाज़ियाबाद वापस जा रहे हैं। हम आपके आशीर्वाद व साथ के आभारी रहेंगे।🙏🙏
— Ias Rani Nagar (@ias_raninagar) May 4, 2020 " class="align-text-top noRightClick twitterSection" data="
">मैं व मेरी बहन रीमा नागर माननीय सरकार से अनुमति लेकर चंडीगढ से अपने पैतृक शहर ग़ाज़ियाबाद वापस जा रहे हैं। हम आपके आशीर्वाद व साथ के आभारी रहेंगे।🙏🙏
— Ias Rani Nagar (@ias_raninagar) May 4, 2020मैं व मेरी बहन रीमा नागर माननीय सरकार से अनुमति लेकर चंडीगढ से अपने पैतृक शहर ग़ाज़ियाबाद वापस जा रहे हैं। हम आपके आशीर्वाद व साथ के आभारी रहेंगे।🙏🙏
— Ias Rani Nagar (@ias_raninagar) May 4, 2020
2014 ಐಎಎಸ್ ಬ್ಯಾಚ್ನ ಅಧಿಕಾರಿಯಾಗಿರುವ ರಾಣಿ ನಗರ್ ತಮ್ಮ ಹುದ್ದೆಗೆ ರಾಜೀನಾಮೆ ಸಲ್ಲಿಕೆ ಮಾಡಿ ಪ್ರಧಾನಿ ಮೋದಿ, ಹರಿಯಾಣ ಗವರ್ನರ್, ಹಾಗೂ ಮುಖ್ಯಮಂತ್ರಿಗೆ ಇ-ಮೇಲ್ ಮಾಡಿದ್ದಾಗಿ ಹೇಳಿದ್ದಾರೆ. ಹರಿಯಾಣ ಸರ್ಕಾರದಲ್ಲಿ ಸಾಮಾಜಿಕ ನ್ಯಾಯ ಮತ್ತು ಸಬಲೀಕರಣ ಇಲಾಖೆಯ ಹೆಚ್ಚುವರಿ ನಿರ್ದೇಶಕಿಯಾಗಿ ಕಾರ್ಯ ನಿರ್ವಹಿಸುತ್ತಿದ್ದರು. ತಮ್ಮ ರಾಜೀನಾಮೆ ಪತ್ರವನ್ನ ಹರಿಯಾಣ ಮುಖ್ಯ ಕಾರ್ಯದರ್ಶಿ ಕೇಶಾನಿ ಆನಂದ್ ಅರೋರಾ ಅವರಿಗೆ ನೀಡಿದ್ದು, ಕೇಂದ್ರ ಸರ್ಕಾರದ ಪ್ರಾಧಿಕಾರಕ್ಕೆ ರವಾನಿಸುವಂತೆ ಮನವಿ ಮಾಡಿಕೊಂಡಿದ್ದಾರೆ. ಸರ್ಕಾರಿ ಕರ್ತವ್ಯದಲ್ಲಿ ವೈಯಕ್ತಿಕ ಸುರಕ್ಷತೆಯ ಆತಂಕದ ಹಿನ್ನೆಲೆಯಲ್ಲಿ ರಾಜೀನಾಮೆ ನೀಡುತ್ತಿರುವುದಾಗಿ ಉಲ್ಲೇಖಿಸಿದ್ದು, ಐಎಎಸ್ ಹುದ್ದೆಗೆ ನಾನು ರಾಜೀನಾಮೆ ನೀಡಿದ್ದೇನೆ ಎಂದು ಫೇಸ್ಬುಕ್ನಲ್ಲಿ ಹೇಳಿಕೊಂಡಿದ್ದಾರೆ.
ದೇಶದಲ್ಲಿ ಲಾಕ್ಡೌನ್ ಜಾರಿಯಾದ ಬಳಿಕ ಫೇಸ್ಬುಕ್ನಲ್ಲಿ ಮಾಹಿತಿ ಹಂಚಿಕೊಂಡಿದ್ದ ಅಧಿಕಾರಿ ತಮ್ಮ ಸ್ಥಾನಕ್ಕೆ ರಾಜೀನಾಮೆ ಕೊಡುವುದಾಗಿ ಹೇಳಿಕೊಂಡಿದ್ದರು.