ನಾಸಿಕ್ : ಮೂವರು ಅಪರಿಚಿತ ವ್ಯಕ್ತಿಗಳು ಸೇರಿ 35 ವರ್ಷದ ಮಹಿಳೆಗೆ ಬೆಂಕಿ ಹಚ್ಚಿರುವ ಘಟನೆ ಮಹಾರಾಷ್ಟ್ರದ ನಾಸಿಕ್ ಜಿಲ್ಲೆಯ ಲಸಲ್ಗಾಂವ್ ಬಸ್ ನಿಲ್ದಾಣದಲ್ಲಿ ಶನಿವಾರ ನಡೆದಿದೆ.
ಸಂತ್ರಸ್ತೆಯು ವಿಧವೆಯಾಗಿದ್ದಾರೆ. ಶನಿವಾರ ಸಂಜೆ 5 ಗಂಟೆ ಸುಮಾರಿಗೆ ಮೂವರು ವ್ಯಕ್ತಿಗಳು ಮಹಿಳೆಯ ಮೇಲೆ ಪೆಟ್ರೋಲ್ ಸುರಿದು ಬೆಂಕಿ ಹಚ್ಚಿ ಪರಾರಿಯಾಗಿದ್ದಾರೆ. ಶೇ.50ರಷ್ಟು ಸುಟ್ಟ ಗಾಯಗಳಿಂದ ಬಳಲುತ್ತಿರುವ ಮಹಿಳೆಯನ್ನ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ.
ಘಟನೆಗೆ ನಿಖರ ಕಾರಣ ತಿಳಿದು ಬಂದಿಲ್ಲ. ಸಂತ್ರಸ್ತೆಯ ಹೇಳಿಕೆ ರೆಕಾರ್ಡ್ ಮಾಡಿಕೊಳ್ಳಲಾಗಿದೆ. ತನಿಖೆ ಮುಂದುವರೆಸಿರುವುದಾಗಿ ಪೊಲೀಸರು ತಿಳಿಸಿದ್ದಾರೆ. ಇತ್ತೀಚೆಗಷ್ಟೇ ಮಹಾರಾಷ್ಟ್ರದ ವಾರ್ದಾ ಜಿಲ್ಲೆಯಲ್ಲಿ ವಿದ್ಯಾರ್ಥಿಗಳೇ 25 ವರ್ಷದ ಶಿಕ್ಷಕಿಗೆ ಬೆಂಕಿ ಹಚ್ಚಿರುವ ಘಟನೆ ನಡೆದಿತ್ತು. ಆದರೆ, ಚಿಕಿತ್ಸೆ ಫಲಕಾರಿಯಾಗದೇ ಫೆ.10 ರಂದು ಸಂತ್ರಸ್ತೆ ಮೃತಪಟ್ಟಿದ್ದರು.