ಮೊರಾದಾಬಾದ್ (ಉತ್ತರಪ್ರದೇಶ): ಕೌಟುಂಬಿಕ ಕಲಹದ ಹಿನ್ನೆಲೆಯಲ್ಲಿ ಮಹಿಳೆಯೊಬ್ಬಳು ಮತ್ತೊಬ್ಬ ಮಹಿಳೆಯನ್ನು ಹಾಡಹಗಲೇ ಕಂಟ್ರಿ ಪಿಸ್ತೂಲ್ನಿಂದ ಗುಂಡು ಹಾರಿಸಿಕೊಂದ ಘಟನೆ ಉತ್ತರ ಪ್ರದೇಶದ ಮೊರಾದಾಬಾದ್ನಲ್ಲಿ ನಡೆದಿದೆ.
ಜೂನ್ 8ರಂದು ಘಟನೆ ನಡೆದಿದ್ದು, ಆರೋಪಿ ಮಹಿಳೆಯನ್ನು ಶಬಾನಾ ಎಂದು ಗುರ್ತಿಸಲಾಗಿದೆ. ತನ್ನ ಪತಿ ಬೇರೊಬ್ಬ ಮಹಿಳೆಯ ಜೊತೆ ವಾಸವಿದ್ದ ಕಾರಣದಿಂದ ನೊಂದ ಶಬಾನಾ ಹಾಡಹಗಲೇ ಕಂಟ್ರಿ ಪಿಸ್ತೂಲ್ನಿಂದ ಆಕೆಯನ್ನು ಕೊಂದಿದ್ದಾಳೆ ಎಂದು ಹೇಳಲಾಗುತ್ತಿದೆ.
ಸದ್ಯಕ್ಕೆ ಮಹಿಳೆಯನ್ನು ಬಂಧಿಸಿರುವ ಪೊಲೀಸರು, ಕಂಟ್ರಿ ಪಿಸ್ತೂಲ್ ಅನ್ನು ವಶಪಡಿಸಿಕೊಂಡು ತನಿಖೆ ಮುಂದುವರೆಸಿದ್ದಾರೆ.