ತ್ರಿಶೂರ್ (ಕೇರಳ): ಕೌಟುಂಬಿಕ ಕಲಹದಿಂದಾಗಿ ಗಂಡ ಕಟ್ಟಿಕೊಂಡ ಹೆಂಡತಿ ಕೊಲೆ ಮಾಡಿರುವ ಘಟನೆ ಕೇರಳದ ತ್ರಿಶೂರ್ದಲ್ಲಿ ನಡೆದಿದ್ದು, ಈಗಾಗಲೇ ಆರೋಪಿ ಬಂಧನ ಮಾಡುವಲ್ಲಿ ಪೊಲೀಸರು ಯಶಸ್ವಿಯಾಗಿದ್ದಾರೆ.
ತ್ರಿಶೂರ್ ಜಿಲ್ಲೆಯ ಮಾಲಾದಲ್ಲಿ ಈ ಘಟನೆ ನಡೆದಿದ್ದು, 30 ವರ್ಷದ ಯುವತಿಯ ಕತ್ತು ಹಿಸುಕಿ ಕೊಲೆ ಮಾಡಲಾಗಿದೆ. ಬುಧವಾರ ದಂಪತಿಗಳ ನಡುವೆ ಜಗಳ ನಡೆದಿದ್ದು, ಇದಾದ ಬಳಿಕ ದುಷ್ಕೃತ್ಯವೆಸಗಿದ್ದಾಗಿ ತಿಳಿದು ಬಂದಿದೆ.
ಘಟನೆ ಬಳಿಕ ಶಂಶಾದ್ ಎರಡು ಮಕ್ಕಳನ್ನ ತನ್ನ ತಾಯಿಯ ಮನೆಯಲ್ಲಿ ಬಿಟ್ಟು ಸ್ನೇಹಿತನ ಮನೆಗೆ ತೆರಳಿದ್ದಾನೆ. ಈ ವೇಳೆ ಶಂಶಾದ್ನ ತಾಯಿಗೆ ಅನುಮಾನ ಬಂದು ಬಾಡಿಗೆ ಮನೆಗೆ ಹೋಗಿ ನೋಡಿದಾಗ ನಿಜಾಂಶ ಹೊರಬಿದ್ದಿದೆ. ತಕ್ಷಣವೇ ನೆರೆಹೊರೆಯವರಿಗೆ ಮಾಹಿತಿ ನೀಡಿದ್ದಾಳೆ. ಸ್ಥಳಕ್ಕಾಗಮಿಸಿದ ಪೊಲೀಸರು ಮೃತದೇಹವನ್ನ ಮರಣೋತ್ತರ ಪರೀಕ್ಷೆಗೆ ರವಾನಿಸಲಾಗಿದ್ದು, ಕೊಲೆ ಮಾಡಿರುವ ವ್ಯಕ್ತಿಯ ಬಂಧನ ಮಾಡಿ ಪ್ರಕರಣ ದಾಖಲು ಮಾಡಿಕೊಂಡಿದ್ದಾರೆ.