ಬನ್ಸ್ವಾರ(ರಾಜಸ್ಥಾನ): ಮಹಿಳೆಯೊಬ್ಬಳು ತನ್ನ ಒಂದೂವರೆ ವರ್ಷದ ಮಗುವನ್ನು ಕೊಂದು ತಾನು ಕೂಡಾ ನೇಣುಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ರಾಜಸ್ಥಾನದ ಬನ್ಸ್ವಾರದಲ್ಲಿ ನಡೆದಿದೆ.
ಕುಟುಂಬಸ್ಥರು ಮನೆಗೆ ತಲುಪುವ ಹೊತ್ತಿಗೆ ಮಗು ಹಾಗೂ ತಾಯಿ ಇಬ್ಬರೂ ಮೃತಪಟ್ಟಿದ್ದರು. ಮಹಿಳೆಯ ಪತಿ ಅಕ್ರಮ ಸಂಬಂಧ ಹೊಂದಿದ್ದು, ಇದೇ ಕಾರಣಕ್ಕೆ ಆತ್ಮಹತ್ಯೆ ಮಾಡಿಕೊಂಡಿದ್ದಾಳೆ ಎಂದು ಮಹಿಳೆಯ ಕುಟುಂಬಸ್ಥರು ಆರೋಪಿಸಿದ್ದಾರೆ.
ಪ್ರಸ್ತುತ ಮರಣೋತ್ತರ ಪರೀಕ್ಷೆಗೆ ಮೃತದೇಹಗಳನ್ನು ಕಳುಹಿಸಲಾಗಿದೆ. ಅಬಾಪುರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಈ ಘಟನೆ ನಡೆದಿದ್ದು, ಮೃತ ಮಹಿಳೆಯನ್ನು ಮನೀಷಾ (25) ಎಂದು ಗುರುತಿಸಲಾಗಿದೆ.