ಕೋಲ್ಕತ್ತಾ: ಸಿಎಎ ವಿರೋಧಿ ಪ್ರತಿಭಟನೆಗಳು ಹಲವಾರು ವಿವಿಗಳು ಮುಂದುವರೆದಿದ್ದು, ಶಿಕ್ಷಣ ಸಂಸ್ಥೆಗಳನ್ನು ರಾಜಕೀಯದ ವ್ಯಾಪ್ತಿಯಿಂದ ಹೊರಗಿಡಬೇಕು ಎಂದು ಕೇಂದ್ರ ಮಾನವ ಸಂಪನ್ಮೂಲ ಸಚಿವ ರಮೇಶ್ ಪೋಖ್ರಿಯಾಲ್ ಹೇಳಿದ್ದಾರೆ
ಕೋಲ್ಕತ್ತಾದಲ್ಲಿ ಮಾತನಾಡಿದ ಅವರು ರಾಜಕೀಯ ಚಟುವಟಿಕೆಗಳಲ್ಲಿ ಭಾಗವಹಿಸಲು ಯಾರಾದರೂ ಸ್ವತಂತ್ರರು. ಆದರೆ, ಕಾಲೇಜುಗಳು ಮತ್ತು ವಿಶ್ವವಿದ್ಯಾಲಯಗಳನ್ನು ಅಂತಹ ಚಟುವಟಿಕೆಗಳ ವ್ಯಾಪ್ತಿಯಿಂದ ಹೊರಗಿಡಬೇಕು. ಶಿಕ್ಷಣ ಸಂಸ್ಥೆಗಳಲ್ಲಿ ಇಂತಹ ಘಟನೆಗಳು ನಡೆದರೆ ಯಾವುದೇ ಕಾರಣಕ್ಕೂ ಮೋದಿ ಸರ್ಕಾರ ಸಹಿಸುವುದಿಲ್ಲ ಎಂದು ಎಚ್ಚರಿಕೆ ನೀಡಿದ್ದಾರೆ.
ಪ್ರಧಾನಿ ನರೇಂದ್ರ ಮೋದಿ ಅವರು ದೇಶದ ಮುಸ್ಲಿಂ ಸಮುದಾಯದ ಹಿತೈಷಿ. ಕಾಂಗ್ರೆಸ್ ನಂತಹ ಪ್ರತಿ ಪಕ್ಷಗಳು ತಪ್ಪು ಮಾಹಿತಿಯನ್ನ ಹರಡುತ್ತಿವೆ ಎಂದು ಕಾಂಗ್ರೆಸ್ ವಿರುದ್ಧ ಕಿಡಿ ಕಾರಿದ್ದಾರೆ.
ಪಶ್ಚಿಮ ಬಂಗಾಳ ರಾಜ್ಯಪಾಲ ಜಗದೀಪ್ ಧಂಖರ್ ವಿರುದ್ಧದ ಪ್ರತಿಭಟನೆ ದುರದೃಷ್ಟಕರ. ಇದು ಕಾನೂನು ಮತ್ತು ಸುವ್ಯವಸ್ಥೆ ಕಾಪಾಡುವಲ್ಲಿ ರಾಜ್ಯ ಸರ್ಕಾರ ತನ್ನ ಹಿಡಿತವನ್ನು ಕಳೆದುಕೊಳ್ಳುವ ಸೂಚನೆಯಾಗಿದೆ ಎಂದಿದ್ದಾರೆ.