ETV Bharat / bharat

ಕೊರೊನಾ ವ್ಯೂಹದಲ್ಲಿ ಪ್ರಪಂಚದಾದ್ಯಂತ 1.2 ಕೋಟಿ ಜನ!

author img

By

Published : Jul 9, 2020, 3:53 PM IST

ಜಗತ್ತಿನಾದ್ಯಂತ ಕೊರೊನಾ ಪ್ರಕರಣಗಳು ಹಾಗೂ ಸಾವಿನ ಸಂಖ್ಯೆಯಲ್ಲಿ ಮೊದಲ ಸ್ಥಾನದಲ್ಲಿರುವ ಅಮೆರಿಕದಲ್ಲಿ ಸೋಂಕಿತರ ಸಂಖ್ಯೆ 30 ಲಕ್ಷ ಗಡಿ ದಾಟಿದ್ದು, ಮೃತರ ಸಂಖ್ಯೆ 1,34,854ಕ್ಕೆ ಏರಿಕೆಯಾಗಿದೆ.

Worldover corona cases and deaths
ಗ್ಲೋಬಲ್​ ಕೋವಿಡ್​ 19 ಟ್ರ್ಯಾಕರ್​

ಹೈದರಾಬಾದ್​: ವಿಶ್ವದಾದ್ಯಂತ ಕೊರೊನಾ ಬರೋಬ್ಬರಿ 1,21,55,40 ಮಂದಿಗೆ ಅಂಟಿದ್ದು, 5,51,184 ಸೋಂಕಿತರು ಮೃತಪಟ್ಟಿದ್ದಾರೆ. ಆದರೆ ಸೋಂಕಿತರ ಪೈಕಿ ಅರ್ಧದಷ್ಟು ಅಂದರೆ 70,25,062ಕ್ಕೂ ಹೆಚ್ಚು ಜನರು ಗುಣಮುಖರಾಗಿದ್ದಾರೆ.

ಕೊರೊನಾ ಪ್ರಕರಣಗಳು ಹಾಗೂ ಸಾವಿನ ಸಂಖ್ಯೆಯಲ್ಲಿ ವಿಶ್ವದಲ್ಲೇ ಮೊದಲ ಸ್ಥಾನದಲ್ಲಿರುವ ಅಮೆರಿಕದಲ್ಲಿ ಸೋಂಕಿತರ ಸಂಖ್ಯೆ 31,58,734 ಇದ್ದು, ಮೃತರ ಸಂಖ್ಯೆ 1,34,854ಕ್ಕೆ ಏರಿಕೆಯಾಗಿದೆ. ಎರಡನೇ ಸ್ಥಾನದಲ್ಲಿರುವ ಬ್ರೆಜಿಲ್​​ನಲ್ಲಿ 17,16,196 ಪ್ರಕರಣಗಳು ಹಾಗೂ 68,055 ಸಾವುಗಳು ವರದಿಯಾಗಿವೆ.

ಸೋಂಕಿತರ ಪೈಕಿ ನಾಲ್ಕನೇ ಸ್ಥಾನದಲ್ಲಿದ್ದ ಭಾರತ ಇದೀಗ ರಷ್ಯಾವನ್ನು ಹಿಂದಿಕ್ಕಿ ಮೂರನೇ ಸ್ಥಾನಕ್ಕೆ ಜಿಗಿದಿದೆ. ಭಾರತದಲ್ಲಿ 7,69,052 ಸೋಂಕಿತರು ಪತ್ತೆಯಾಗಿದ್ದು, ಈವರೆಗೆ 21,144 ಮಂದಿ ಮೃತಪಟ್ಟಿದ್ದಾರೆ. ರಷ್ಯಾದಲ್ಲಿ 7,00,792 ಕೇಸ್​ಗಳಿದ್ದು, 10,667 ಜನರು ಸಾವನ್ನಪ್ಪಿದ್ದಾರೆ.

ಒಟ್ಟು 188 ರಾಷ್ಟ್ರಗಳು ಕೋವಿಡ್​ ಹೊಡೆತಕ್ಕೆ ಸಿಲುಕಿದ್ದು, ಕೊರೊನಾ​ ಪೀಡಿತ ವಿಶ್ವದ ಟಾಪ್​ 10 ರಾಷ್ಟ್ರಗಳ ಮಾಹಿತಿ ಇಲ್ಲಿದೆ.

Worldover corona cases and deaths
ಗ್ಲೋಬಲ್​ ಕೋವಿಡ್​ 19 ಟ್ರ್ಯಾಕರ್​

ಕೋವಿಡ್​ ಮೊಟ್ಟಮೊದಲು ಕಾಣಿಸಿಕೊಂಡು, ಅದರಿಂದ ಚೇತರಿಸಿಕೊಂಡಿದ್ದ ಚೀನಾದಲ್ಲಿ ಮತ್ತೆ ಕೇಸ್​ಗಳು​ ಪತ್ತೆಯಾಗುತ್ತಿವೆ. 2019ರ ಡಿಸೆಂಬರ್​ನಿಂದ ಈವರೆಗೆ ಚೀನಾದಲ್ಲಿ 83,581 ಪ್ರಕರಣಗಳು ಹಾಗೂ 4,634 ಸಾವುಗಳು ವರದಿಯಾಗಿವೆ.

ETV Bharat Logo

Copyright © 2024 Ushodaya Enterprises Pvt. Ltd., All Rights Reserved.