ಹೈದರಾಬಾದ್: ಕೋವಿಡ್ ಕಪಿಮುಷ್ಠಿಯಲ್ಲಿ ವಿಶ್ವದ ಬರೋಬ್ಬರಿ 2,02,37,888 ಜನರು ಸಿಲುಕಿದ್ದು, 7,37,866 ಮಂದಿ ಮೃತಪಟ್ಟಿದ್ದಾರೆ. ಆದರೆ 2 ಕೋಟಿ ಸೋಂಕಿತರ ಪೈಕಿ ಒಂದು ಕೋಟಿ 31 ಲಕ್ಷ ಜನರು (1,31,00,237) ಸೋಂಕಿನಿಂದ ಗುಣಮುಖರಾಗಿದ್ದಾರೆ.
ಅಮೆರಿಕ, ಬ್ರೆಜಿಲ್ ಮತ್ತು ಭಾರತದಲ್ಲೇ ಮೂರನೇ ಎರಡರಷ್ಟು ಕೋವಿಡ್ ಪ್ರಕರಣಗಳಿವೆ. ಶೇ. 40ರಷ್ಟು ಸೋಂಕಿತರಿಗೆ ರೋಗ ಲಕ್ಷಣಗಳೇ ಇಲ್ಲ ಎಂದು ಆರೋಗ್ಯಾಧಿಕಾರಿಗಳು ತಿಳಿಸಿದ್ದಾರೆ.
ಕೊರೊನಾ ಪ್ರಕರಣಗಳು ಹಾಗೂ ಸಾವಿನ ಸಂಖ್ಯೆಯಲ್ಲಿ ವಿಶ್ವದಲ್ಲೇ ಮೊದಲ ಸ್ಥಾನದಲ್ಲಿರುವ ಅಮೆರಿಕದಲ್ಲಿ ಸೋಂಕಿತರ ಸಂಖ್ಯೆ 52,50,766 ಇದ್ದು, ಮೃತರ ಸಂಖ್ಯೆ 1,66,163ಕ್ಕೆ ಏರಿಕೆಯಾಗಿದೆ. ಎರಡನೇ ಸ್ಥಾನದಲ್ಲಿರುವ ಬ್ರೆಜಿಲ್ನಲ್ಲಿ 30,57,470 ಪ್ರಕರಣಗಳು ಹಾಗೂ 1,01,857 ಸಾವುಗಳು ವರದಿಯಾಗಿವೆ.
ಮೂರನೇ ಸ್ಥಾನಕ್ಕೆ ಜಿಗಿದಿರುವ ಭಾರತದಲ್ಲಿ 22,67,153 ಸೋಂಕಿತರು ಪತ್ತೆಯಾಗಿದ್ದು, ಈವರೆಗೆ 45,353 ಮಂದಿ ಮೃತಪಟ್ಟಿದ್ದಾರೆ. 4ನೇ ಸ್ಥಾನದಲ್ಲಿರುವ ರಷ್ಯಾದಲ್ಲಿ 8,92,654 ಕೇಸ್ಗಳಿದ್ದು, 15,001 ಜನರು ಸಾವನ್ನಪ್ಪಿದ್ದಾರೆ.
ಒಟ್ಟು 188 ರಾಷ್ಟ್ರಗಳು ಕೋವಿಡ್ ಹೊಡೆತಕ್ಕೆ ಸಿಲುಕಿದ್ದು, ಕೊರೊನಾ ಪೀಡಿತ ವಿಶ್ವದ ಟಾಪ್ 10 ರಾಷ್ಟ್ರಗಳ ಮಾಹಿತಿ ಇಲ್ಲಿದೆ.
ಕೋವಿಡ್ ಮೊಟ್ಟಮೊದಲು ಕಾಣಿಸಿಕೊಂಡು ಅದರಿಂದ ಚೇತರಿಸಿಕೊಂಡಿದ್ದ ಚೀನಾದಲ್ಲಿ ಮತ್ತೆ ಕೇಸ್ಗಳು ಪತ್ತೆಯಾಗುತ್ತಿವೆ. ಆದರೆ ಯಾವುದೇ ಸಾವು ವರದಿಯಾಗಿಲ್ಲ. 2019ರ ಡಿಸೆಂಬರ್ನಿಂದ ಈವರೆಗೆ ಚೀನಾದಲ್ಲಿ 84,712 ಪ್ರಕರಣಗಳು ಹಾಗೂ 4,634 ಸಾವುಗಳು ವರದಿಯಾಗಿವೆ.