ಹೈದರಾಬಾದ್: ಜಗದಗಲ ಬರೋಬ್ಬರಿ 2,18,17,650 ಜನರಿಗೆ ಮಾರಣಾಂತಿಕ ಕೊರೊನಾ ವೈರಸ್ ಅಂಟಿದ್ದು, 7,72,751 ಸೋಂಕಿತರು ಮೃತಪಟ್ಟಿದ್ದಾರೆ. ಆದರೆ ಸೋಂಕಿತರ ಪೈಕಿ ಅರ್ಧಕ್ಕೂ ಹೆಚ್ಚು ಅಂದರೆ 1,45,53,191 ಮಂದಿ ಗುಣಮುಖರಾಗಿದ್ದಾರೆ.
ಕೊರೊನಾ ಪ್ರಕರಣಗಳು ಹಾಗೂ ಸಾವಿನ ಸಂಖ್ಯೆಯಲ್ಲಿ ವಿಶ್ವದಲ್ಲೇ ಮೊದಲ ಸ್ಥಾನದಲ್ಲಿರುವ ಅಮೆರಿಕದಲ್ಲಿ ಸೋಂಕಿತರ ಸಂಖ್ಯೆ 55,66,600 ಇದ್ದು, ಮೃತರ ಸಂಖ್ಯೆ 1,73,128ಕ್ಕೆ ಏರಿಕೆಯಾಗಿದೆ. ಎರಡನೇ ಸ್ಥಾನದಲ್ಲಿರುವ ಬ್ರೆಜಿಲ್ನಲ್ಲಿ 33,40,197 ಪ್ರಕರಣಗಳು ಹಾಗೂ 1,07,879 ಸಾವುಗಳು ವರದಿಯಾಗಿವೆ.
ಮೂರನೇ ಸ್ಥಾನಕ್ಕೆ ಜಿಗಿದಿರುವ ಭಾರತದಲ್ಲಿ 26,47,316 ಸೋಂಕಿತರು ಪತ್ತೆಯಾಗಿದ್ದು, ಈವರೆಗೆ 51,045 ಮಂದಿ ಮೃತಪಟ್ಟಿದ್ದಾರೆ. 4ನೇ ಸ್ಥಾನದಲ್ಲಿರುವ ರಷ್ಯಾದಲ್ಲಿ 9,22,853 ಕೇಸ್ಗಳಿದ್ದು, 15,685 ಜನರು ಸಾವನ್ನಪ್ಪಿದ್ದಾರೆ.
ಒಟ್ಟು 188 ರಾಷ್ಟ್ರಗಳು ಕೋವಿಡ್ ಹೊಡೆತಕ್ಕೆ ಸಿಲುಕಿದ್ದು, ಕೊರೊನಾ ಪೀಡಿತ ವಿಶ್ವದ ಟಾಪ್ 10 ರಾಷ್ಟ್ರಗಳ ಮಾಹಿತಿ ಇಲ್ಲಿದೆ.
ಕೋವಿಡ್ ಮೊಟ್ಟಮೊದಲು ಕಾಣಿಸಿಕೊಂಡು ಅದರಿಂದ ಚೇತರಿಸಿಕೊಂಡಿದ್ದ ಚೀನಾದಲ್ಲಿ ಮತ್ತೆ ಕೇಸ್ಗಳು ಪತ್ತೆಯಾಗುತ್ತಿವೆ. 2019ರ ಡಿಸೆಂಬರ್ನಿಂದ ಈವರೆಗೆ ಚೀನಾದಲ್ಲಿ 84,849 ಪ್ರಕರಣಗಳು ಹಾಗೂ 4,634 ಸಾವುಗಳು ವರದಿಯಾಗಿವೆ.
ಆಗಸ್ಟ್ 4 ರಂದು 180 ಮಂದಿಯನ್ನು ಬಲಿ ಪಡೆದು, 6000 ಜನರನ್ನು ಗಾಯಗೊಳಿಸಿದ ಭಾರಿ ಸ್ಫೋಟದ ಬಳಿಕ ಲೆಬನಾನ್ ದೇಶದಲ್ಲಿ ಸೋಂಕಿತರ ಸಂಖ್ಯೆ ಕೂಡ ಹೆಚ್ಚಾಗುತ್ತಿದೆ. ಕೇಲವ 6 ಮಿಲಿಯನ್ ಜನಸಂಖ್ಯೆ ಹೊಂದಿರುವ ಲೆಬನಾನ್ನಲ್ಲಿ ಈವರೆಗೆ 8,881 ಜನರು ಸೋಂಕಿಗೆ ಒಳಗಾಗಿದ್ದು, 103 ಮಂದಿ ಬಲಿಯಾಗಿದ್ದಾರೆ.