ಹೈದರಾಬಾದ್: ಜಗತ್ತಿನಲ್ಲಿ ಕೋವಿಡ್ ಸೋಂಕಿತರ ಸಂಖ್ಯೆ ಎರಡೂವರೆ ಕೋಟಿ (2,51,55,782) ಗಡಿ ದಾಟಿದೆ. 8,45,956 ಜನರು ಮಹಾಮಾರಿಗೆ ಬಲಿಯಾಗಿದ್ದು, ಸೋಂಕಿತರ ಪೈಕಿ ಅರ್ಧಕ್ಕೂ ಹೆಚ್ಚು ಅಂದರೆ 1,74,99,592 ಮಂದಿ ಗುಣಮುಖರಾಗಿದ್ದಾರೆ.
ಕೊರೊನಾ ಪ್ರಕರಣಗಳು ಹಾಗೂ ಸಾವಿನ ಸಂಖ್ಯೆಯಲ್ಲಿ ವಿಶ್ವದಲ್ಲೇ ಮೊದಲ ಸ್ಥಾನದಲ್ಲಿರುವ ಅಮೆರಿಕದಲ್ಲಿ ಸೋಂಕಿತರ ಸಂಖ್ಯೆ 61,39,078 ಇದ್ದು, ಮೃತರ ಸಂಖ್ಯೆ 1,86,855ಕ್ಕೆ ಏರಿಕೆಯಾಗಿದೆ. ಎರಡನೇ ಸ್ಥಾನದಲ್ಲಿರುವ ಬ್ರೆಜಿಲ್ನಲ್ಲಿ 38,46,965 ಪ್ರಕರಣಗಳು ಹಾಗೂ 1,20,498 ಸಾವುಗಳು ವರದಿಯಾಗಿವೆ.
ಮೂರನೇ ಸ್ಥಾನದಲ್ಲಿರುವ ಭಾರತದಲ್ಲಿ 35,39,712 ಸೋಂಕಿತರು ಪತ್ತೆಯಾಗಿದ್ದು, ಈವರೆಗೆ 63,657 ಮಂದಿ ಮೃತಪಟ್ಟಿದ್ದಾರೆ. 4ನೇ ಸ್ಥಾನದಲ್ಲಿರುವ ರಷ್ಯಾದಲ್ಲಿ 9,85,346 ಕೇಸ್ಗಳಿದ್ದು, 17,025 ಜನರು ಸಾವನ್ನಪ್ಪಿದ್ದಾರೆ.
ಒಟ್ಟು 188 ರಾಷ್ಟ್ರಗಳು ಕೋವಿಡ್ ಹೊಡೆತಕ್ಕೆ ಸಿಲುಕಿದ್ದು, ಕೊರೊನಾ ಪೀಡಿತ ವಿಶ್ವದ ಟಾಪ್ 10 ರಾಷ್ಟ್ರಗಳ ಮಾಹಿತಿ ಇಲ್ಲಿದೆ.
ಕೋವಿಡ್ ಮೊಟ್ಟಮೊದಲು ಕಾಣಿಸಿಕೊಂಡು ಅದರಿಂದ ಚೇತರಿಸಿಕೊಂಡಿದ್ದ ಚೀನಾದಲ್ಲಿ ಈಗ ಬೆರಳೆಣಿಕೆಯಷ್ಟು ಕೇಸ್ಗಳು ಪತ್ತೆಯಾಗುತ್ತಿವೆ. 2019ರ ಡಿಸೆಂಬರ್ನಿಂದ ಈವರೆಗೆ ಚೀನಾದಲ್ಲಿ 85,031 ಪ್ರಕರಣಗಳು ಹಾಗೂ 4,634 ಸಾವುಗಳು ವರದಿಯಾಗಿವೆ.
ಅಮೆರಿಕ, ಬ್ರೆಜಿಲ್, ಭಾರತದ ಹೊರತಾಗಿ ಮೆಕ್ಸಿಕೋ, ಬ್ರಿಟನ್ ಹಾಗೂ ಫ್ರಾನ್ಸ್ ದೇಶಗಳಲ್ಲಿ ಕೊರೊನಾಗೆ ಬಲಿಯಾದವರ ಸಂಖ್ಯೆ 30 ಸಾವಿರ ಗಡಿ ದಾಟಿದೆ.