ETV Bharat / bharat

ವಿಶ್ವದಲ್ಲಿ 2.5 ಕೋಟಿ ಸೋಂಕಿತರು.. ಮಹಾಮಾರಿ ಅಟ್ಟಹಾಸಕ್ಕೆ 8.5 ಲಕ್ಷ ಮಂದಿ ಬಲಿ

ಒಟ್ಟು 188 ರಾಷ್ಟ್ರಗಳು ಕೋವಿಡ್​ ಹೊಡೆತಕ್ಕೆ ಸಿಲುಕಿದ್ದು, ಪ್ರಕರಣಗಳು ಹಾಗೂ ಸಾವಿನ ಸಂಖ್ಯೆಯಲ್ಲಿ ವಿಶ್ವದಲ್ಲೇ ಮೊದಲ ಸ್ಥಾನದಲ್ಲಿರುವ ಅಮೆರಿಕದಲ್ಲಿ ಸೋಂಕಿತರ ಸಂಖ್ಯೆ 61,73,236 ಇದ್ದು, ಮೃತರ ಸಂಖ್ಯೆ 1,87,224ಕ್ಕೆ ಏರಿಕೆಯಾಗಿದೆ.

author img

By

Published : Aug 31, 2020, 5:52 PM IST

Worldover corona cases and deaths
ಗ್ಲೋಬಲ್​ ಕೋವಿಡ್​ 19 ಟ್ರ್ಯಾಕರ್​

ಹೈದರಾಬಾದ್​: ಪ್ರಪಂಚದಾದ್ಯಂತ ಬರೋಬ್ಬರಿ 2,53,84,823 ಜನರು ಕೋವಿಡ್​ ಸುಳಿಯಲ್ಲಿ ಸಿಲುಕಿದ್ದು, 8,50,592 ಸೋಂಕಿತರು ಮೃತಪಟ್ಟಿದ್ದಾರೆ. ಆದರೆ ಸೋಂಕಿತರ ಪೈಕಿ ಅರ್ಧಕ್ಕೂ ಹೆಚ್ಚು ಅಂದರೆ 1,77,06,841 ಮಂದಿ ಗುಣಮುಖರಾಗಿದ್ದಾರೆ.

ಕೊರೊನಾ ಪ್ರಕರಣಗಳು ಹಾಗೂ ಸಾವಿನ ಸಂಖ್ಯೆಯಲ್ಲಿ ವಿಶ್ವದಲ್ಲೇ ಮೊದಲ ಸ್ಥಾನದಲ್ಲಿರುವ ಅಮೆರಿಕದಲ್ಲಿ ಸೋಂಕಿತರ ಸಂಖ್ಯೆ 61,73,236 ಇದ್ದು, ಮೃತರ ಸಂಖ್ಯೆ 1,87,224ಕ್ಕೆ ಏರಿಕೆಯಾಗಿದೆ. ಎರಡನೇ ಸ್ಥಾನದಲ್ಲಿರುವ ಬ್ರೆಜಿಲ್​​ನಲ್ಲಿ 38,62,311 ಪ್ರಕರಣಗಳು ಹಾಗೂ 1,20,896 ಸಾವುಗಳು ವರದಿಯಾಗಿವೆ.

ಮೂರನೇ ಸ್ಥಾನಕ್ಕೆ ಜಿಗಿದಿರುವ ಭಾರತದಲ್ಲಿ 36,19,169 ಸೋಂಕಿತರು ಪತ್ತೆಯಾಗಿದ್ದು, ಈವರೆಗೆ 64,617 ಮಂದಿ ಮೃತಪಟ್ಟಿದ್ದಾರೆ. 4ನೇ ಸ್ಥಾನದಲ್ಲಿರುವ ರಷ್ಯಾದಲ್ಲಿ 9,90,326 ಕೇಸ್​​ಗಳಿದ್ದು, 17,093 ಜನರು ಸಾವನ್ನಪ್ಪಿದ್ದಾರೆ.

ಒಟ್ಟು 188 ರಾಷ್ಟ್ರಗಳು ಕೋವಿಡ್​ ಹೊಡೆತಕ್ಕೆ ಸಿಲುಕಿದ್ದು, ಕೊರೊನಾ​ ಪೀಡಿತ ವಿಶ್ವದ ಟಾಪ್​ 10 ರಾಷ್ಟ್ರಗಳ ಮಾಹಿತಿ ಇಲ್ಲಿದೆ.

Worldover corona cases and deaths
ಗ್ಲೋಬಲ್​ ಕೋವಿಡ್​ 19 ಟ್ರ್ಯಾಕರ್​

ಕೋವಿಡ್​ ಮೊಟ್ಟಮೊದಲು ಕಾಣಿಸಿಕೊಂಡು ಅದರಿಂದ ಚೇತರಿಸಿಕೊಂಡಿದ್ದ ಚೀನಾದಲ್ಲಿ ಇದೀಗ ಬೆರಳೆಣಿಕೆಯಷ್ಟು ಕೇಸ್​ಗಳು​ ಪತ್ತೆಯಾಗುತ್ತಿವೆ. 2019ರ ಡಿಸೆಂಬರ್​ನಿಂದ ಈವರೆಗೆ ಚೀನಾದಲ್ಲಿ 85,048 ಪ್ರಕರಣಗಳು ಹಾಗೂ 4,634 ಸಾವುಗಳು ವರದಿಯಾಗಿವೆ.

ETV Bharat Logo

Copyright © 2024 Ushodaya Enterprises Pvt. Ltd., All Rights Reserved.