ಹೈದರಾಬಾದ್: ಜಾಗತಿಕ ಮಹಾಮಾರಿ ಕೊರೊನಾ ವಿಶ್ವದಾದ್ಯಂತ ಬರೋಬ್ಬರಿ 2,56,34,102 ಜನರಿಗೆ ತಗುಲಿದ್ದು, 8,54,763 ಸೋಂಕಿತರು ಮೃತಪಟ್ಟಿದ್ದಾರೆ. ಆದರೆ ಸೋಂಕಿತರ ಪೈಕಿ ಅರ್ಧಕ್ಕೂ ಹೆಚ್ಚು ಅಂದರೆ 1,79,39,176 ಮಂದಿ ಗುಣಮುಖರಾಗಿದ್ದಾರೆ.
ಕೊರೊನಾ ಪ್ರಕರಣಗಳು ಹಾಗೂ ಸಾವಿನ ಸಂಖ್ಯೆಯಲ್ಲಿ ವಿಶ್ವದಲ್ಲೇ ಮೊದಲ ಸ್ಥಾನದಲ್ಲಿರುವ ಅಮೆರಿಕದಲ್ಲಿ ಸೋಂಕಿತರ ಸಂಖ್ಯೆ 62,11,796 ಇದ್ದು, ಮೃತರ ಸಂಖ್ಯೆ 1,87,736ಕ್ಕೆ ಏರಿಕೆಯಾಗಿದೆ. ಎರಡನೇ ಸ್ಥಾನದಲ್ಲಿರುವ ಬ್ರೆಜಿಲ್ನಲ್ಲಿ 39,10,901 ಪ್ರಕರಣಗಳು ಹಾಗೂ 1,21,515 ಸಾವುಗಳು ವರದಿಯಾಗಿವೆ.
ಮೂರನೇ ಸ್ಥಾನಕ್ಕೆ ಜಿಗಿದಿರುವ ಭಾರತದಲ್ಲಿ 36,87,939 ಸೋಂಕಿತರು ಪತ್ತೆಯಾಗಿದ್ದು, ಈವರೆಗೆ 65,435 ಮಂದಿ ಮೃತಪಟ್ಟಿದ್ದಾರೆ. 4ನೇ ಸ್ಥಾನದಲ್ಲಿರುವ ರಷ್ಯಾದಲ್ಲಿ 9,95,319 ಕೇಸ್ಗಳಿದ್ದು, 17,176 ಜನರು ಸಾವನ್ನಪ್ಪಿದ್ದಾರೆ.
ಒಟ್ಟು 188 ರಾಷ್ಟ್ರಗಳು ಕೋವಿಡ್ ಹೊಡೆತಕ್ಕೆ ಸಿಲುಕಿದ್ದು, ಕೊರೊನಾ ಪೀಡಿತ ವಿಶ್ವದ ಟಾಪ್ 10 ರಾಷ್ಟ್ರಗಳ ಮಾಹಿತಿ ಇಲ್ಲಿದೆ.
![Worldover corona cases and deaths](https://etvbharatimages.akamaized.net/etvbharat/prod-images/8633019_err34r.jpg)
ಕೋವಿಡ್ ಮೊಟ್ಟಮೊದಲು ಕಾಣಿಸಿಕೊಂಡು ಅದರಿಂದ ಚೇತರಿಸಿಕೊಂಡಿದ್ದ ಚೀನಾದಲ್ಲಿ ಇದೀಗ ಬೆರಳೆಣಿಕೆಯಷ್ಟು ಕೇಸ್ಗಳು ಪತ್ತೆಯಾಗುತ್ತಿವೆ. 2019ರ ಡಿಸೆಂಬರ್ನಿಂದ ಈವರೆಗೆ ಚೀನಾದಲ್ಲಿ 85,058 ಪ್ರಕರಣಗಳು ಹಾಗೂ 4,634 ಸಾವುಗಳು ವರದಿಯಾಗಿವೆ.