ಹೈದರಾಬಾದ್: ಜಾಗತಿಕ ಮಹಾಮಾರಿ ಕೊರೊನಾ ವೈರಸ್ಗೆ ಇಡೀ ಜಗತ್ತೇ ತಲ್ಲಣಗೊಂಡಿದೆ. ಒಟ್ಟು 2,80,14,827 ಜನರು ಸೋಂಕಿಗೆ ಒಳಗಾಗಿದ್ದರೆ, 9,07,304 ಮಂದಿ ಕೋವಿಡ್ ಆರ್ಭಟಕ್ಕೆ ಬಲಿಯಾಗಿದ್ದಾರೆ. ಆದರೆ ಎರಡೂ ಕೋಟಿಗೂ ಹೆಚ್ಚು (2,00,91,717) ಮಂದಿ ಗುಣಮುಖರಾಗಿದ್ದಾರೆ.
ಕೊರೊನಾ ಪ್ರಕರಣಗಳು ಹಾಗೂ ಸಾವಿನ ಸಂಖ್ಯೆಯಲ್ಲಿ ವಿಶ್ವದಲ್ಲೇ ಮೊದಲ ಸ್ಥಾನದಲ್ಲಿರುವ ಅಮೆರಿಕದಲ್ಲಿ ಸೋಂಕಿತರ ಸಂಖ್ಯೆ 65,49,475 ಇದ್ದು, ಮೃತರ ಸಂಖ್ಯೆ 1,95,239ಕ್ಕೆ ಏರಿಕೆಯಾಗಿದೆ. ಇದುವರೆಗೂ ಮೂರನೇ ಸ್ಥಾನದಲ್ಲಿದ್ದ ಭಾರತ ಇದೀಗ ಕೋವಿಡ್ ಪ್ರಕರಣಗಳ ಪೈಕಿ ಬ್ರೆಜಿಲ್ ಹಿಂದಿಕ್ಕಿ ಎರಡನೇ ಸ್ಥಾನಕ್ಕೆ ಜಿಗಿದಿದೆ. ಬ್ರೆಜಿಲ್ನಲ್ಲಿ 41,99,332 ಪ್ರಕರಣಗಳು ಹಾಗೂ 1,28,653 ಸಾವುಗಳು ವರದಿಯಾಗಿದ್ದರೆ, ಭಾರತದಲ್ಲಿ ಸೋಂಕಿತರ ಸಂಖ್ಯೆ 44,62,965 ಹಾಗೂ ಮೃತರ ಸಂಖ್ಯೆ 75,091ಕ್ಕೆ ಏರಿಕೆಯಾಗಿದೆ.
4ನೇ ಸ್ಥಾನದಲ್ಲಿರುವ ರಷ್ಯಾದಲ್ಲಿ 10,41,007 ಕೇಸ್ಗಳಿದ್ದು, 18,135 ಜನರು ಸಾವನ್ನಪ್ಪಿದ್ದಾರೆ. ಒಟ್ಟು 188 ರಾಷ್ಟ್ರಗಳು ಕೋವಿಡ್ ಹೊಡೆತಕ್ಕೆ ಸಿಲುಕಿದ್ದು, ಕೊರೊನಾ ಪೀಡಿತ ವಿಶ್ವದ ಟಾಪ್ 10 ರಾಷ್ಟ್ರಗಳ ಮಾಹಿತಿ ಇಲ್ಲಿದೆ.
ಕೋವಿಡ್ ಮೊಟ್ಟಮೊದಲು ಕಾಣಿಸಿಕೊಂಡು ಅದರಿಂದ ಚೇತರಿಸಿಕೊಂಡಿದ್ದ ಚೀನಾದಲ್ಲಿ ಬೆರಳೆಣಿಕೆಯಷ್ಟು ಕೇಸ್ಗಳು ಪತ್ತೆಯಾಗುತ್ತಿವೆ. 2019ರ ಡಿಸೆಂಬರ್ನಿಂದ ಈವರೆಗೆ ಚೀನಾದಲ್ಲಿ 85,153 ಪ್ರಕರಣಗಳು ಹಾಗೂ 4,634 ಸಾವುಗಳು ವರದಿಯಾಗಿವೆ.