ಹೈದರಾಬಾದ್: ವಿಶ್ವಾದ್ಯಂತ ಬರೋಬ್ಬರಿ 3,80,40,148 ಜನರಿಗೆ ಕಿಲ್ಲರ್ ಕೊರೊನಾ ವೈರಸ್ ಅಂಟಿದ್ದು, 10,85,373 ಸೋಂಕಿತರು ಮೃತಪಟ್ಟಿದ್ದಾರೆ. ಆದರೆ, ಸೋಂಕಿತರ ಪೈಕಿ 2,85,98,151 ಮಂದಿ ಗುಣಮುಖರಾಗಿದ್ದಾರೆ.
ಕೊರೊನಾ ಪ್ರಕರಣಗಳು ಹಾಗೂ ಸಾವಿನ ಸಂಖ್ಯೆಯಲ್ಲಿ ವಿಶ್ವದಲ್ಲೇ ಮೊದಲ ಸ್ಥಾನದಲ್ಲಿರುವ ಅಮೆರಿಕದಲ್ಲಿ ಸೋಂಕಿತರ ಸಂಖ್ಯೆ 80,37,789 ಇದ್ದು, ಮೃತರ ಸಂಖ್ಯೆ 2,20,011ಕ್ಕೆ ಏರಿಕೆಯಾಗಿದೆ.
ಕೇಸ್ಗಳ ಪೈಕಿ ಎರಡನೇ ಸ್ಥಾನದಲ್ಲಿರುವ ಭಾರತದಲ್ಲಿ ಈವರೆಗೆ 71,73,565 ಕೇಸ್ಗಳು ಪತ್ತೆಯಾಗಿದ್ದು, 1,09,894 ಜನರು ವೈರಸ್ಗೆ ಬಲಿಯಾಗಿದ್ದಾರೆ. ಮೂರನೇ ಸ್ಥಾನದಲ್ಲಿರುವ ಬ್ರೆಜಿಲ್ನಲ್ಲಿ 51,03,408 ಪ್ರಕರಣಗಳು ಹಾಗೂ 1,50,709 ಸಾವುಗಳು ವರದಿಯಾಗಿದೆ.
4ನೇ ಸ್ಥಾನದಲ್ಲಿರುವ ರಷ್ಯಾದಲ್ಲಿ 13,12,310 ಕೇಸ್ಗಳಿದ್ದು, 22,722 ಜನರು ಸಾವನ್ನಪ್ಪಿದ್ದಾರೆ. ಒಟ್ಟು 188 ರಾಷ್ಟ್ರಗಳು ಕೋವಿಡ್ ಹೊಡೆತಕ್ಕೆ ಸಿಲುಕಿದ್ದು, ಕೊರೊನಾ ಪೀಡಿತ ವಿಶ್ವದ ಟಾಪ್ 10 ರಾಷ್ಟ್ರಗಳ ಮಾಹಿತಿ ಇಲ್ಲಿದೆ.
ಕೋವಿಡ್ ಮೊಟ್ಟಮೊದಲು ಕಾಣಿಸಿಕೊಂಡು ಅದರಿಂದ ಚೇತರಿಸಿಕೊಂಡಿದ್ದ ಚೀನಾದಲ್ಲಿ ಬೆರಳೆಣಿಕೆಯಷ್ಟು ಕೇಸ್ಗಳು ಪತ್ತೆಯಾಗುತ್ತಿವೆ. 2019ರ ಡಿಸೆಂಬರ್ನಿಂದ ಈವರೆಗೆ ಚೀನಾದಲ್ಲಿ 85,591 ಪ್ರಕರಣಗಳು ಹಾಗೂ 4,634 ಸಾವುಗಳು ವರದಿಯಾಗಿವೆ.