ಹೈದರಾಬಾದ್: 11,36,341 ಜನರು ಮಾರಣಾಂತಿಕ ಕೋವಿಡ್ನಿಂದಾಗಿ ತಮ್ಮ ಪ್ರಾಣ ಕಳೆದುಕೊಂಡಿದ್ದು, ಅಮೆರಿಕ, ಬ್ರೆಜಿಲ್, ಭಾರತ, ಮೆಕ್ಸಿಕೋ ಹಾಗೂ ಇಂಗ್ಲೆಂಡ್ ಸಾವಿನ ಸಂಖ್ಯೆಯಲ್ಲಿ ಮೊದಲ ಐದು ಸ್ಥಾನಗಳಲ್ಲಿವೆ.
ವಿಶ್ವಾದ್ಯಂತ ಬರೋಬ್ಬರಿ 4,14,87,185 ಮಂದಿ ಕೊರೊನಾ ಸುಳಿಯಲ್ಲಿ ಸಿಲುಕಿದ್ದು, ಇವರಲ್ಲಿ 3,09,14,158 ಸೋಂಕಿತರು ಗುಣಮುಖರಾಗಿದ್ದಾರೆ. ಕೊರೊನಾ ಪ್ರಕರಣಗಳು ಹಾಗೂ ಸಾವಿನ ಸಂಖ್ಯೆ ಎರಡರಲ್ಲೂ ವಿಶ್ವದಲ್ಲೇ ಮೊದಲ ಸ್ಥಾನದಲ್ಲಿರುವ ಅಮೆರಿಕದಲ್ಲಿ ಸೋಂಕಿತರ ಸಂಖ್ಯೆ 85,84,819 ಇದ್ದು, ಮೃತರ ಸಂಖ್ಯೆ 2,27,409ಕ್ಕೆ ಏರಿಕೆಯಾಗಿದೆ.
ಕೇಸ್ಗಳ ಪೈಕಿ ಎರಡನೇ ಸ್ಥಾನದಲ್ಲಿರುವ ಭಾರತದಲ್ಲಿ ಈವರೆಗೆ 77,06,946 ಕೇಸ್ಗಳು ಪತ್ತೆಯಾಗಿದ್ದು, 1,16,653 ಜನರು ವೈರಸ್ಗೆ ಬಲಿಯಾಗಿದ್ದಾರೆ. ಮೂರನೇ ಸ್ಥಾನದಲ್ಲಿರುವ ಬ್ರೆಜಿಲ್ನಲ್ಲಿ 53,00,649 ಪ್ರಕರಣಗಳು ಹಾಗೂ 1,55,459 ಸಾವುಗಳು ವರದಿಯಾಗಿದೆ. 4ನೇ ಸ್ಥಾನದಲ್ಲಿರುವ ರಷ್ಯಾದಲ್ಲಿ 14,47,335 ಕೇಸ್ಗಳಿದ್ದು, 24,952 ಜನರು ಸಾವನ್ನಪ್ಪಿದ್ದಾರೆ. ಒಟ್ಟು 188 ರಾಷ್ಟ್ರಗಳು ಕೋವಿಡ್ ಹೊಡೆತಕ್ಕೆ ಸಿಲುಕಿದ್ದು, ಕೊರೊನಾ ಪೀಡಿತ ವಿಶ್ವದ ಟಾಪ್ 10 ರಾಷ್ಟ್ರಗಳ ಮಾಹಿತಿ ಇಲ್ಲಿದೆ.
ಕೋವಿಡ್ ಮೊಟ್ಟಮೊದಲು ಕಾಣಿಸಿಕೊಂಡು ಅದರಿಂದ ಚೇತರಿಸಿಕೊಂಡಿದ್ದ ಚೀನಾದಲ್ಲಿ ಬೆರಳೆಣಿಕೆಯಷ್ಟು ಕೇಸ್ಗಳು ಪತ್ತೆಯಾಗುತ್ತಿವೆ. 2019ರ ಡಿಸೆಂಬರ್ನಿಂದ ಈವರೆಗೆ ಚೀನಾದಲ್ಲಿ 85,729 ಪ್ರಕರಣಗಳು ಹಾಗೂ 4,634 ಸಾವುಗಳು ವರದಿಯಾಗಿವೆ.