ಹೈದರಾಬಾದ್: ಮಾಸ್ಕ್ ಧರಿಸುವ, ಆಗಾಗ ಕೈ ತೊಳೆಯುವ, ಸಾಮಾಜಿಕ ಅಂತರ ಕಾಯ್ದುಕೊಳ್ಳುವ ಮಹತ್ವವನ್ನು ಸಾರುವಂತೆ ಮಾಡಿದ್ದು ಕಣ್ಣಿಗೆ ಕಾಣದ ಒಂದು ವೈರಸ್. ನೈರ್ಮಲ್ಯ, ಸ್ವಚ್ಛತೆ ಬಗ್ಗೆ ಇಡೀ ಜಗತ್ತಿಗೆ ಪಾಠ ಕಲಿಸಿರುವ ಕೊರೊನಾ ತನ್ನ ಬಲೆಯಲ್ಲಿ 4,29,24,533 ಜನರನ್ನು ಸಿಲುಕಿಸಿಕೊಂಡಿದೆ. ವಿಶ್ವದಾದ್ಯಂತ 11,54,761 ಸೋಂಕಿತರು ಮೃತಪಟ್ಟಿದ್ದು, ಸೋಂಕಿತರ ಪೈಕಿ 3,16,66,683 ಮಂದಿ ಗುಣಮುಖರಾಗಿದ್ದಾರೆ.
ಕೊರೊನಾ ಪ್ರಕರಣಗಳು ಹಾಗೂ ಸಾವಿನ ಸಂಖ್ಯೆಯಲ್ಲಿ ವಿಶ್ವದಲ್ಲೇ ಮೊದಲ ಸ್ಥಾನದಲ್ಲಿರುವ ಅಮೆರಿಕದಲ್ಲಿ ಸೋಂಕಿತರ ಸಂಖ್ಯೆ 88,27,932 ಇದ್ದು, ಮೃತರ ಸಂಖ್ಯೆ 2,30,068ಕ್ಕೆ ಏರಿಕೆಯಾಗಿದೆ.
ಕೇಸ್ಗಳ ಪೈಕಿ ಎರಡನೇ ಸ್ಥಾನದಲ್ಲಿರುವ ಭಾರತದಲ್ಲಿ ಈವರೆಗೆ 78,63,892 ಕೇಸ್ಗಳು ಪತ್ತೆಯಾಗಿದ್ದು, 1,18,567 ಜನರು ವೈರಸ್ಗೆ ಬಲಿಯಾಗಿದ್ದಾರೆ. ಮೂರನೇ ಸ್ಥಾನದಲ್ಲಿರುವ ಬ್ರೆಜಿಲ್ನಲ್ಲಿ 53,81,224 ಪ್ರಕರಣಗಳು ಹಾಗೂ 1,56,926 ಸಾವುಗಳು ವರದಿಯಾಗಿದೆ.
4ನೇ ಸ್ಥಾನದಲ್ಲಿರುವ ರಷ್ಯಾದಲ್ಲಿ 14,97,167 ಕೇಸ್ಗಳಿದ್ದು, 25,821 ಜನರು ಸಾವನ್ನಪ್ಪಿದ್ದಾರೆ. 200ಕ್ಕೂ ರಾಷ್ಟ್ರಗಳು ಕೋವಿಡ್ ಹೊಡೆತಕ್ಕೆ ಸಿಲುಕಿದ್ದು, ಕೊರೊನಾ ಪೀಡಿತ ವಿಶ್ವದ ಟಾಪ್ 10 ರಾಷ್ಟ್ರಗಳ ಮಾಹಿತಿ ಇಲ್ಲಿದೆ.
ಕೋವಿಡ್ ಮೊಟ್ಟಮೊದಲು ಕಾಣಿಸಿಕೊಂಡು ಅದರಿಂದ ಚೇತರಿಸಿಕೊಂಡಿದ್ದ ಚೀನಾದಲ್ಲಿ ಬೆರಳೆಣಿಕೆಯಷ್ಟು ಕೇಸ್ಗಳು ಪತ್ತೆಯಾಗುತ್ತಿವೆ. 2019ರ ಡಿಸೆಂಬರ್ನಿಂದ ಈವರೆಗೆ ಚೀನಾದಲ್ಲಿ 85,790 ಪ್ರಕರಣಗಳು ಹಾಗೂ 4,634 ಸಾವುಗಳು ವರದಿಯಾಗಿವೆ.