ETV Bharat / bharat

ಸರ್ದಾರ್​​​ ಪಟೇಲ್ ಕೋವಿಡ್ ಕೇರ್​ ಸೆಂಟರ್​ನಲ್ಲಿ ಸೋಂಕಿತರಿಗೆ ಯೋಗಾಭ್ಯಾಸ

author img

By

Published : Oct 17, 2020, 5:17 PM IST

ಭಾರತದಲ್ಲಿ ಕೋವಿಡ್​ ವ್ಯಾಪಿಸುತ್ತಿದ್ದು, ಜನರಲ್ಲಿ ಭೀತಿ ಉಂಟು ಮಾಡಿದೆ. ಈ ಮಧ್ಯೆ ಕೊರೊನಾ ಸೋಂಕಿತರಿಗೆ ಆತ್ಮಸ್ಥೈರ್ಯ ತುಂಬುವ ಸಲುವಾಗಿ ಸರ್ದಾರ್​​​​ ಪಟೇಲ್​ ಕೋವಿಡ್ ಕೇರ್ ಸೆಂಟರ್‌ನಲ್ಲಿ ಯೋಗ ಕಾರ್ಯಕ್ರಮ ಆಯೋಜಿಸಲಾಗಿತ್ತು.

Yoga for Covid patients
ಕೋವಿಡ್ ಕೇರ್​ ಸೆಂಟರ್​ನಲ್ಲಿ ಯೋಗಾಭ್ಯಾಸ..!

ದೆಹಲಿ : ದೇಶದಲ್ಲಿ ಕೋವಿಡ್ ಪ್ರಕರಣಗಳು ಹೆಚ್ಚುತ್ತಿದ್ದು, ವೈರಸ್ ನಿಯಂತ್ರಣಕ್ಕೆ ಸರ್ಕಾರ ಹಲವಾರು ಕ್ರಮಗಳನ್ನ ಕೈಗೊಂಡಿದೆ. ಈ ಮಧ್ಯೆ ಸೋಂಕಿತರಿಗೆ ಆತ್ಮಸ್ಥೈರ್ಯ ತುಂಬಲು ಸರ್ದಾರ್​​​​ ಪಟೇಲ್​ ಕೋವಿಡ್ ಕೇರ್ ಸೆಂಟರ್​ ಹಾಗೂ ಛತ್ತಪುರ್​ ಬಳಿಯ ರಾಧ ಸೊಯಾಮಿ ಸತ್ಸಂಗ್​ ಆಸ್ಪತ್ರೆಯಲ್ಲಿ ಯೋಗ ಕಾರ್ಯಕ್ರಮ ಆಯೋಜಿಸಿಲಾಗಿತ್ತು.

ಇಂಡೋ -ಟಿಬೆಟಿಯನ್ ಪೊಲೀಸರು ನಡೆಸುವ ಕೋವಿಡ್​​ ಕೇಂದ್ರದಿಂದ ಈವರೆಗೆ 7,000 ಕ್ಕೂ ಅಧಿಕ ಸೋಂಕಿತರು ಗುಣಮುಖರಾಗಿ ಡಿಸ್ಚಾರ್ಜ್ ಆಗಿದ್ದಾರೆ ಎಂದು ಐಟಿಬಿಪಿ ಪ್ರಕಟಣೆಯಲ್ಲಿ ತಿಳಿಸಿದೆ.

ಅಕ್ಟೋಬರ್ 8 ರಂದು ಸರ್ದಾರ್​​ ಪಟೇಲ್ ಕೇರ್ ಸೆಂಟರ್​ನಲ್ಲಿ ಕೋವಿಡ್ ಸೋಂಕಿತ ಮಕ್ಕಳಿಗಾಗಿ ಚಿತ್ರಕಲೆ ಸ್ಪರ್ಧೆಯನ್ನ ಏರ್ಪಡಿಸಲಾಗಿತ್ತು. ಮಕ್ಕಳಿಗೆ ಆತ್ಮಸ್ಥೈರ್ಯ ತುಂಬುವ ಸಲುವಾಗಿ ಈ ಕಾರ್ಯಕ್ರಮ ಆಯೋಜಿಸಲಾಗಿದ್ದು, ಎಲ್ಲ ಮಕ್ಕಳು ಹುರುಪಿನಿಂದ ಪಾಲ್ಗೊಂಡಿದ್ದರು.

ಈ ರೀತಿಯ ಕಾರ್ಯಕ್ರಮಗಳನ್ನ ಆಯೋಜಿಸುವುದರಿಂದ ವೈರಸ್ ಪೀಡಿತರಿಗೆ ಆತ್ಮಸ್ಥೈರ್ಯ ಹೆಚ್ಚಾಗಿ ಶೀಘ್ರ ಗುಣಮುಖರಾಗುತ್ತಾರೆ ಅನ್ನೋದು ವೈದ್ಯರ ಅಭಿಪ್ರಾಯ.

ETV Bharat Logo

Copyright © 2024 Ushodaya Enterprises Pvt. Ltd., All Rights Reserved.