ETV Bharat / bharat

ಏಪ್ರಿಲ್ ​15ರ ಬಳಿಕ ಉತ್ತರ ಪ್ರದೇಶದಲ್ಲಿ ಹಂತ ಹಂತವಾಗಿ ಲಾಕ್​ಡೌನ್​ ತೆರವು

ರಾಜ್ಯದಲ್ಲಿ ಏಪ್ರಿಲ್​ 15ರ ನಂತರ ಹಂತ ಹಂತವಾಗಿ ಲಾಕ್‌ಡೌನ್ ತೆರವುಗೊಳಿಸುವುದಾಗಿ ಉತ್ತರ ಪ್ರದೇಶ ಸರ್ಕಾರ ಹೇಳಿದೆ.

author img

By

Published : Apr 5, 2020, 1:14 PM IST

yogi adityanath
yogi adityanath

ಲಖನೌ(ಯುಪಿ): ಕೊರೊನಾ ವೈರಸ್​ ತಡೆಯಲು ಕೇಂದ್ರ ಸರ್ಕಾರ ಘೋಷಿಸಿರುವ 21 ದಿನಗಳ ಲಾಕ್‌ಡೌನ್‌ ಏಪ್ರಿಲ್​ 14ರವರೆಗೆ ಮುಂದುವರಿಯಲಿದೆ. ಆದ್ರೆ, ಕಟ್ಟುನಿಟ್ಟಿನ ನಿರ್ಬಂಧದ ನಡುವೆಯೂ ಕೂಡ ದೇಶದಲ್ಲಿ ಸೋಂಕಿತರ ಸಂಖ್ಯೆ ದಿನೇ ದಿನೇ ಹೆಚ್ಚಾಗುತ್ತಿದೆ.

ದೇಶದ ಅತಿ ದೊಡ್ಡ ರಾಜ್ಯವಾಗಿರುವ ಉತ್ತರಪ್ರದೇಶದಲ್ಲಿ ಸೋಂಕಿತರ ಸಂಖ್ಯೆ ಈಗಾಗಲೇ 200ರ ಗಡಿ ದಾಟಿದೆ. ಅನೇಕರು ಇಲ್ಲಿ ಈಗಾಗಲೇ ಪ್ರಾಣ ಕಳೆದುಕೊಂಡಿದ್ದಾರೆ. ಈ ಸಂದರ್ಭದಲ್ಲಿ ಏಪ್ರಿಲ್​ 15ರ ಬಳಿಕ ಹಂತ ಹಂತವಾಗಿ ಲಾಕ್​ಡೌನ್​ ತೆರವು​ ಮಾಡುವುದಾಗಿ ಸಿಎಂ ಯೋಗಿ ಆದಿತ್ಯನಾಥ್ ಚಿಂತನೆ ನಡೆಸಿದ್ದಾರೆ.

ಕಳೆದ ಮೂರು ದಿನಗಳಿಂದ ರಾಜ್ಯದಲ್ಲಿ ಕೊರೊನಾ ವೈರಸ್​ ಪ್ರಕರಣಗಳು ಏರುಗತಿಯಲ್ಲಿ ಸಾಗುತ್ತಿವೆ. ತಬ್ಲಿಘಿ ಜಮಾತ್​​ ಸಭೆಯಲ್ಲಿ ಭಾಗಿಯಾದ ರಾಜ್ಯದ ನಿವಾಸಿಗಳು ಸೋಂಕು ಹರಡಲು ಕಾರಣರಾಗುತ್ತಿದ್ದಾರೆ ಎಂದು ಸಿಎಂ ತಿಳಿಸಿದ್ದಾರೆ.

ಹಂತಹಂತವಾಗಿ ಲಾಕ್​ಡೌನ್​ ತೆರವು​ ಮಾಡುವ ಬಗ್ಗೆ ಯೋಗಿ ಆದಿತ್ಯನಾಥ್​, ಸಂಸದರು, ಶಾಸಕರು ಹಾಗೂ ಕ್ಯಾಬಿನೆಟ್​ ದರ್ಜೆ ಸಚಿವರೊಂದಿಗೆ ಚರ್ಚೆ ನಡೆಸಿದ್ದಾರೆ.

ಇದಕ್ಕೂ ಮುನ್ನ ರಾಜ್ಯದ ಡಿಜಿಪಿ,ಎಎಸ್​ಪಿ ಜತೆ ಮಾತುಕತೆ ನಡೆಸಿ ರಾಜ್ಯದ ಸ್ಥಿತಿಗತಿ ಬಗ್ಗೆ ಮಾಹಿತಿ ಪಡೆದುಕೊಂಡಿದ್ದಾಗಿ ತಿಳಿದು ಬಂದಿದೆ.

ETV Bharat Logo

Copyright © 2024 Ushodaya Enterprises Pvt. Ltd., All Rights Reserved.