ಲಖನೌ: ಕೊರೊನಾ ವಿರುದ್ಧದ ಹೋರಾಟದಲ್ಲಿ ಕಣ್ಗಾವಲು, ಅನುಸರಣೆ, ಸಂಪರ್ಕ ಪತ್ತೆ ಹಚ್ಚುವಿಕೆಯನ್ನು ಹೆಚ್ಚಿಸಲು ಉತ್ತರ ಪ್ರದೇಶದ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಅಧಿಕಾರಿಗಳಿಗೆ ಸೂಚನೆ ನೀಡಿದ್ದಾರೆ.
ಉತ್ತರಪ್ರದೇಶದಲ್ಲಿ ದಿನೇ ದಿನೆ ಹೆಚ್ಚಾಗುತ್ತಿರುವ ಕೊರೊನಾ ಪ್ರಕರಣಗಳ ಹಿನ್ನೆಲೆ ಈ ನಿರ್ಧಾರ ಮಾಡಲಾಗಿದೆ. ಒಂದೇ ದಿನದಲ್ಲಿ ಅತೀ ಹೆಚ್ಚು ಪ್ರಕರಣಗಳು ಕಂಡು ಬಂದಿದ್ದು, 49,247 ಕ್ಕೆ ಸೋಂಕಿತರ ಸಂಖ್ಯೆ ಏರಿಕೆಯಾಗಿದೆ.
ರಾಜ್ಯದಲ್ಲಿ ಒಂದೇ ದಿನ 38 ಸಾವು - ನೋವುಗಳು ಸಂಭವಿಸಿದ್ದು,ಸಾವಿನ ಸಂಖ್ಯೆ 1,146 ಕ್ಕೆ ತಲುಪಿದೆ. ರಾಜ್ಯ ಆರೋಗ್ಯ ಇಲಾಖೆ ನೀಡಿದ ಮಾಹಿತಿಯ ಪ್ರಕಾರ ರಾಜ್ಯದಲ್ಲಿ ಡಿಸ್ಚಾರ್ಜ್ ಆದ ಒಟ್ಟು ಪ್ರಕರಣಗಳ ಸಂಖ್ಯೆ 29,845 ಆಗಿದೆ.ಈ ಹಿನ್ನೆಲೆ ಏರುತ್ತಿರುವ ಪ್ರಕರಣಗಳನ್ನು ನಿಯಂತ್ರಣ ಮಾಡಲು ಹಾಗೂ ಪರಿಣಾಮಕಾರಿ ಯೋಜನೆಗಳನ್ನು ಅಭಿವೃದ್ಧಿಪಡಿಸಲು ಸಿಎಂ ಅಧಿಕಾರಿಗಳಿಗೆ ನಿರ್ದೇಶನ ನೀಡಿದ್ದಾರೆ.
ಕೊರೊನಾ ಹರಡುವಿಕೆ ನಿಯಂತ್ರಿಸಲು ಯೋಗಿ ಆದಿತ್ಯನಾಥ್ ಅವರು, ಎಲ್ಲ ಜಿಲ್ಲಾಧಿಕಾರಿಗಳು, ಪೊಲೀಸ್ ಮುಖ್ಯಸ್ಥರು, ಮುಖ್ಯ ವೈದ್ಯಕೀಯ ಅಧಿಕಾರಿಗಳು, ವೈದ್ಯಕೀಯ ಕಾಲೇಜುಗಳ ಪ್ರಾಂಶುಪಾಲರು ಮತ್ತು ಪುರಸಭೆ ಅಧಿಕಾರಿಗಳು ಪರಿಣಾಮಕಾರಿ ಮತ್ತು ಸಕಾರಾತ್ಮಕ ಕ್ರಮಗಳನ್ನು ಚರ್ಚಿಸಬೇಕು ಮತ್ತು ಅನುಷ್ಠಾನಕ್ಕೆ ಉತರಬೇಕು. ಅಲ್ಲದೇ, ಒಳಪಡುವವರ ಗುರುತಿನ ಪುರಾವೆ ಮತ್ತು ದೂರವಾಣಿ ಸಂಖ್ಯೆಯನ್ನು COVID-19 ರೋಗಿಗಳ ಡೇಟಾಬೇಸ್ ಇಂಟಿಗ್ರೇಟೆಡ್ ಕಮಾಂಡ್ ಅಂಡ್ ಕಂಟ್ರೋಲ್ ಸೆಂಟರ್ (ಐಸಿಸಿಸಿ) ನಲ್ಲಿ ನಮೂದಿಸಬೇಕು ಎಂದು ಹೇಳಿದ್ದಾರೆ.
ಇನ್ನು ಸ್ವಿಫ್ಟ್ ಟ್ರ್ಯಾಕಿಂಗ್ಗಾಗಿ ರಾಜ್ಯದ ಪ್ರತಿಯೊಂದು ಜಿಲ್ಲೆಯಲ್ಲೂ ಕಮಾಂಡ್ ಕಂಟ್ರೋಲ್ ಕೇಂದ್ರಗಳನ್ನು ಸ್ಥಾಪಿಸಲಾಗಿದೆ. ಹೊಸ ಪ್ರಕರಣಗಳನ್ನು ಪತ್ತೆಹಚ್ಚಲು ಮಾತ್ರವಲ್ಲದೇ ರೋಗಿಗಳನ್ನು COVID ಕೇರ್ಗೆ ಕರೆದೊಯ್ಯಲು, ಸಂಪರ್ಕ ಪತ್ತೆಹಚ್ಚುವಿಕೆ, ಕಣ್ಗಾವಲು ಇಡಲು ಮತ್ತು ಆ್ಯಂಬುಲೆನ್ಸ್ಗಳನ್ನ ಒದಗಿಸಲು ಕಮಾಂಡ್ ಕೇಂದ್ರಗಳನ್ನು ಪ್ರಸ್ತಾಪಿಸಲಾಗಿದೆ. ತ್ವರಿತ ಫಲಿತಾಂಶಗಳನ್ನು ನೀಡಲು ಹಾಗೂ ಪರೀಕ್ಷೆಯ ವೇಗ ಹೆಚ್ಚಿಸಲು ರಾಜ್ಯ ಸರ್ಕಾರ ಈ ನಿರ್ಧಾರಕ್ಕೆ ಬಂದಿದೆ ಎಂದು ಹೆಚ್ಚುವರಿ ಮುಖ್ಯ ಕಾರ್ಯದರ್ಶಿ ಅವನಿಶ್ ಅವಸ್ಥಿ ಹೇಳಿದ್ದಾರೆ.