ETV Bharat / bharat

ಜೂನ್ 18ರಂದು ಅಯೋಧ್ಯೆಗೆ ಯೋಗಿ ಭೇಟಿ.. ಜು.1ಕ್ಕೆ ಭೂಮಿ ಪೂಜೆ ಸಾಧ್ಯತೆ - ಉತ್ತರ ಪ್ರದೇಶ ಮುಖ್ಯಂತ್ರಿ ಯೋಗಿ ಆದಿತ್ಯನಾಥ್

ಜುಲೈ 1 ರಂದು ರಾಮ ಮಂದಿರ ನಿರ್ಮಾಣದ ಭೂಮಿ ಪೂಜೆ ನಡೆಯುವ ಸಾಧ್ಯತೆ ಇದ್ದು, ಪ್ರಧಾನಿ ಮೋದಿಗೆ ಆಹ್ವಾನವನ್ನು ನೀಡಲಾಗಿದೆ.

Yogi to visit Ayodhya on June 18
ಜೂನ್ 18ರಂದು ಅಯೋಧ್ಯೆಗೆ ಯೋಗಿ ಭೇಟಿ
author img

By

Published : Jun 15, 2020, 8:13 PM IST

ಲಖನೌ: ಉತ್ತರ ಪ್ರದೇಶ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಅವರು ಜೂನ್ 18 ರಂದು ಅಯೋಧ್ಯೆಗೆ ಭೇಟಿ ನೀಡಿ, ರಾಮ ಮಂದಿರ ನಿರ್ಮಾಣದ 'ಭೂಮಿ ಪೂಜೆ' ಸಿದ್ಧತೆಗಳನ್ನು ಪರಿಶೀಲಿಸಲಿದ್ದಾರೆ.

ಲಾಕ್​ಡೌನ್​ ಸಡಿಲಿಕೆ ಬೆನ್ನಲ್ಲೆ ಅಯೋಧ್ಯೆಯಲ್ಲಿ ರಾಮ ಮಂದಿರದ ಕಾರ್ಯ ಭರದಿಂದ ಸಾಗುತ್ತಿದ್ದು ಭೂಮಿ ಪೂಜೆಗೆ ಸಿದ್ಧತೆ ನಡೆಸಲಾಗುತ್ತಿದೆ. ಈ ಬಗ್ಗೆ ಟ್ವೀಟ್ ಮಾಡಿರುವ ಉತ್ತರ ಪ್ರದೇಶ ಮುಖ್ಯಮಂತ್ರಿ ಕಾರ್ಯಾಲಯ, ಸಿಎಂ ಯೋಗಿ ಆದಿತ್ಯನಾಥ್ ಜೂನ್ 18 ರಂದು ಅಯೋಧ್ಯೆಗೆ ಭೇಟಿ ನೀಡಲಿದ್ದು, ಭೂಮಿ ಪೂಜೆ ಸಿದ್ಧತೆಗಳನ್ನು ಪರಿಶೀಲನೆ ನಡೆಸಲಿದ್ದಾರೆ ಎಂದು ತಿಳಿಸಿದ್ದಾರೆ. ಜುಲೈ 1 ರಂದು ಭೂಮಿ ಪೂಜೆ ನಡೆಯುವ ಸಾಧ್ಯತೆ ಇದೆ.

ಭೂಮಿ ಪೂಜೆಗೆ ಹಾಜರಾಗಲು ಪ್ರಧಾನಿ ನರೇಂದ್ರ ಮೋದಿಯವರಿಗೆ ಆಹ್ವಾನವನ್ನು ನೀಡಿದ್ದೇವೆ ಎಂದು ಶ್ರೀರಾಮ ಜನ್ಮಭೂಮಿ ತೀರ್ಥ ಕ್ಷೇತ್ರ ಟ್ರಸ್ಟ್‌ನ ಪ್ರಧಾನ ಕಾರ್ಯದರ್ಶಿ ಚಂಪತ್ ರೈ ಹೇಳಿದ್ದಾರೆ. ಆದರೆ ಕೋವಿಡ್-19 ಬಿಕ್ಕಟ್ಟಿನಿಂದ ಪ್ರಧಾನಿ ಮೋದಿ ಭಾಗವಹಿಸಲು ಸಾಧ್ಯವಾಗದಿರಬಹುದು. ವಿಡಿಯೋ ಕಾನ್ಫರೆನ್ಸ್​ ಮೂಲಕ ಹಾಜರಾಗುವ ಸಾಧ್ಯತೆ ಇದೆ ಎಂದು ಮೂಲಗಳು ತಿಳಿಸಿವೆ.

ಅಭಿವೃದ್ಧಿ ಕಾರ್ಯಗಳ ಪ್ರಗತಿ ಮತ್ತು ಅಯೋಧ್ಯೆಯಲ್ಲಿ ಕಾನೂನು ಸುವ್ಯವಸ್ಥೆ ಬಗ್ಗೆಯೂ ಮುಖ್ಯಮಂತ್ರಿಗಳು ಪರಿಶೀಲನೆ ನಡೆಸಲಿದ್ದಾರೆ. ದೇವಾಲಯ ಸ್ಥಳದ ನೆಲ ಸಮಗೊಳಿಸುವಿಕೆ ಕಾರ್ಯ ಭರದಿಂದ ಸಾಗುತ್ತಿದ್ದು, ಸ್ಥಳದಲ್ಲಿ ಮಣ್ಣಿನ ಪರೀಕ್ಷೆಯನ್ನು ಮಾಡಲಾಗುತ್ತಿದೆ.

ETV Bharat Logo

Copyright © 2025 Ushodaya Enterprises Pvt. Ltd., All Rights Reserved.